ಕಾಸರಗೋಡು: ಕಾಸರಗೋಡು ಜಿಲ್ಲೆ ಐತಿಹಾಸಿಕ ಸಾಧನೆ ಮಾಡಿದೆ. ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್ ಕಾಲೇಜುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂತಿಮ ರೋಗಿ ಕೂಡ ಗುಣಮುಖರಾಗುವುದರೊಂದಿಗೆ ಎಲ್ಲಾ ಕೊರೊನಾ ವೈರಸ್ ಬಾ„ತರು ಮನೆಗೆ ವಾಪಸಾಗಿದ್ದಾರೆ. ಜಿಲ್ಲೆಯಲ್ಲಿ 178 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢೀಕರಿಸಲಾಗಿತ್ತು. ಈ 178 ಮಂದಿಯೂ ಗುಣಮುಖರಾಗಿದ್ದು ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಡಾಕ್ಟರ್‍ಗಳು, ದಾದಿಯರು, ಆರೋಗ್ಯ ಕಾರ್ಯಕರ್ತರು ಶ್ಲಾಘನೆಗೆ ಪಾತ್ರರಾಗಿದ್ದಾರೆ.
ರಾಜ್ಯದಲ್ಲಿ ಭಾನುವಾರ ಹೊಸದಾಗಿ 7 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢೀಕರಿಸಲಾಗಿದೆ. ವಯನಾಡು-3, ತೃಶ್ಶೂರು-2, ಎರ್ನಾಕುಳಂ ಮತ್ತು ಮಲಪ್ಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಂತೆ ಸೋಂಕು ತಗಲಿದೆ. ಇದೇ ವೇಳೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಗುಣಮುಖರಾಗಿದ್ದಾರೆ. ಕಣ್ಣೂರು ಜಿಲ್ಲೆಯಲ್ಲಿ 2, ಕಾಸರಗೋಡು ಮತ್ತು ಪಾಲ್ಘಾಟ್ ಜಿಲ್ಲೆಯ ತಲಾ ಒಬ್ಬರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈ ವರೆಗೆ 489 ಮಂದಿ ಗುಣಮುಖರಾಗಿದ್ದಾರೆ. 20 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟು 26712 ಮಂದಿ ನಿಗಾವಣೆಯಲ್ಲಿದ್ದಾರೆ. ಈ ಪೈಕಿ 26350 ಮಂದಿ ಮನೆಗಳಲ್ಲೂ, 362 ಮಂದಿ ಆಸ್ಪತ್ರೆಗಳಲ್ಲೂ ನಿಗಾವಣೆಯಲ್ಲಿದ್ದಾರೆ. ರವಿವಾರ ಶಂಕಿತ 135 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವರೆಗೆ 37464 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಲಭ್ಯ 36630 ನೆಗೆಟಿವ್ ಆಗಿದೆ.
11 ಕೇಸು ದಾಖಲು : ಲಾಕ್ ಡೌನ್ ಉಲ್ಲಂಘಿಸಿದ ಆರೋಪದಲ್ಲಿ 11 ಕೇಸುಗಳನ್ನು ದಾಖಲಿಸಲಾಗಿದೆ. ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ 1, ಕುಂಬಳೆ-4, ವಿದ್ಯಾನಗರ-3, ಕಾಸರಗೋಡು-1, ಬೇಡಡ್ಕ-1, ಚಿಟ್ಟಾರಿಕ್ಕಲ್-1 ಎಂಬಂತೆ ಪೆÇಲೀಸರು ಕೇಸು ದಾಖಲಿಸಿದ್ದಾರೆ. ವಿವಿಧ ಪ್ರಕರಣಗಳಿಗೆ ಸಂಬಂ„ಸಿ 18 ಮಂದಿಯನ್ನು ಬಂ„ಸಲಾಗಿದೆ. ವಾಹನವೊಂದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ತನಕ 2095 ಕೇಸುಗಳನ್ನು ದಾಖಲಿಸಲಾಗಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿ 2712 ಮಂದಿಯನ್ನು ಬಂಧಿಸಲಾಗಿದೆ. 870 ವಾಹನಗಳನ್ನು ವಶಪಡಿಸಲಾಗಿದೆ.


