HEALTH TIPS

ಮಾಜಿ ಪ್ರಧಾನಿ ಡಾ. ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು

        ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
      ಏಮ್ಸ್ ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಮಾಜಿ ಪ್ರಧಾನಿ ಡಾ. ಸಿಂಗ್ ಅವರನ್ನು ನಿನ್ನೆ ರಾತ್ರಿ  8:45 ರ ವೇಳೆಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
        ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಡಾ. ನಿತೀಶ್ ನಾಯ್ಕ್ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ. ವಿರೋಧ ಪಕ್ಷ ಕಾಂಗ್ರೆಸ್ ನ ನಾಯಕರಾಗಿರುವ ಸಿಂಗ್ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. 2009 ರಲ್ಲಿ ಡಾ. ಸಿಂಗ್ ಅವರಿಗೆ ಏಮ್ಸ್ ನಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು.
     ಮಾಜಿ ಸಿಎಂ ಸಿದ್ದರಾಮಯ್ಯ, ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಅವರು ಟ್ವೀಟ್ ಮಾಡಿದ್ದು, ಮನಮೋಹನ್ ಸಿಂಗ್ ಅವರ ಶೀಘ್ರ ಚೇತರಿಕೆ, ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries