ಕಾಸರಗೋಡು: ಕೊರೋನಾ ಅವಧಿಯಲ್ಲಿ ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಜ್ಜುಗೊಂಡಿದ್ದು, ಮೇ26ರಿಂದ ಎಸ್.ಎಸ್.ಸಲ್.ಸಿ. , ಹೈಯರ್ ಸೆಕೆಂಡರಿ ಪರೀಕ್ಷೆಗಳು ಆರಂಭಗೊಳ್ಳಲಿದೆ. ಈ ಬಗ್ಗೆ ಸಿದ್ಧತೆ ಪೂರ್ಣಗೊಂಡಿವೆ.
ಜಿಲ್ಲೆಯಲ್ಲಿ ಈಗಾಗಲೇ ನಡೆದಿರುವ ಪರೀಕ್ಷೆಗೆ 53344 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಜಿಲ್ಲೆಯಲ್ಲಿ ಮೇ 26ರಂದು ನಡೆಯುವ ಪರೀಕ್ಷೆಗೆ 153 ಸೆಂಟರ್ ಗಳಲ್ಲಿ 19630 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವರು. 106 ಕೇಂದ್ರಗಳಲ್ಲಾಗಿ 16677 ಪ್ಲಸ್ ವನ್ ಮತ್ತು 17037 ಪ್ಲಸ್‍ಟು ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ. 22 ಕೇಂದ್ರಗಳಲ್ಲಿ 3 ಸಾವಿರ ವಿದ್ಯಾರ್ಥಿಗಳು ವಿ.ಎಚ್.ಎಸ್.ಸಿ. ಪರೀಕ್ಷೆಗೆ ಹಾಜರಾಗುವರು.
ಇದೇ ವೇಳೆ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗಬೇಕಿರುವ 297 ಮಂದಿ ವಿದ್ಯಾರ್ಥಿಗಳು ಲಾಕ್ ಡೌನ್ ಕಾರಣದಿಂದ ಕರ್ನಾಟಕದ ವಿವಿಧೆಡೆ ಬಾಕಿಯಾಗಿದ್ದಾರೆ. ಇವರಲ್ಲಿ 33 ಮಂದಿ ಸ್ವಯಂ ಪರೀಕ್ಷೆಗೆ ಹಾಜರಾಗುವುದಾಗಿ ಈಗಾಗಲೇತಿಳಿಸಿದ್ದಾರೆ. ಉಳಿದಂತೆ 264 ಮಂದಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗಬೇಕಾದ ವಿದ್ಯಾರ್ಥಿಗಳು, 204 ಮಂದಿ ಹೈಯರ್‍ಸೆಕೆಂಡರಿ ಪರೀಕ್ಷೆಗೆ ಹಾಜರಾಗಬೇಕಾದ ವಿದ್ಯಾರ್ಥಿಗಳು ಕರ್ನಾಟಕದಲ್ಲಿದ್ದಾರೆ. ಜಿಲ್ಲೆಯ ಯಾವ ಪ್ರದೇಶಗಳಲ್ಲೂ ಪರೀಕ್ಷೆಯ ಕೇದ್ರಗಳಲ್ಲಿ ಬದಲಾವಣೆಯಿಲ್ಲ. ಹಾಟ್ ಸ್ಪಾಟ್ ಗಳಾಗಿರುವ ಗ್ರಾಮಪಂಚಾಯಿತಿ, ನಗರಸಭೆಗಳ ಪರೀಕ್ಷೆ ಕೇಂದ್ರಗಳಲ್ಲೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು. ಆದರೆ ಕಂಟೈನ್‍ಮೆಂಟ್ ಝೋನ್‍ಗಳಿಂದ ಬರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಸೌಲಭ್ಯ ಏರ್ಪಡಿಸಲಾಗುವುದು.ಇದಕ್ಕಿರುವ ಸಿದ್ಧತೆ ಪೂರ್ತಿಗೊಂಡಿರುವುದಾಗಿ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


