ಕಾಸರಗೋಡು: ಕೊರೋನಾ ಪ್ರತಿರೋಧ ಚಟುವಟಿಕೆಗಳಲ್ಲಿ ಮುಂಚೂಣಿಯ ಹೋರಾಟಗಾರರಾಗಿರುವ ಆರೋಗ್ಯ ಕಾರ್ಯಕರ್ತರನ್ನು ರಾಜ್ಯ ಸರಕಾರ ವತಿಯಿಂದ ಅಭಿನಂದಿಸಲಾಯಿತು. ಉಕ್ಕಿನಡ್ಕ ಮೆಡಿಕಲ್ ಕಾಲೇಜಿನಲ್ಲಿ ಈ ಸಂಬಂಧ ಶನಿವಾರ ನಡೆದ ಸರಳ ಸಮಾರಂಭದಲ್ಲಿ ಕಂದಾಯ ಸಚಿವ ಇ.ಚಂದ್ರಶೇಖರನ್ ಅಭಿನಂದನೆ ನಡೆಸಿದರು. ಜಿಲ್ಲಾಡಳಿತೆ, ಪೆÇಲೀಸ್ ಇಲಾಖೆ ಮತ್ತು ಸಾರ್ವಜನಿಕ ಜಾಗೃತಿ ಕೂಡ ಈ ನಿಟ್ಟಿನಲ್ಲಿ ಬಲುದೊಡ್ಡ ಯೋಗದಾನ ನೀಡಿದೆ ಎಂದು ಸಚಿವ ಈ ವೇಳೆ ತಿಳಿಸಿದರು. ಶಾಸಕ ಎಂ.ರಾಜಗೋಪಾಲನ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ಟಿ.ಮನೋಜ್, ಎನ್.ಎಚ್.ಎಂ. ಜಿಲ್ಲಾ ಯೋಜನೆ ಪ್ರಬಂಧಕ ಡಾ.ರಾಮನ್ ಸ್ವಾತಿ ವಾಮನ್, ಆಲಪ್ಪುಳ ಸರಕಾರಿ ಮೆಡಿಕಲ್ ಕಾಲೇಜು ಸಹಾಯಕ ವರಿಷ್ಠಾಧಿಕಾರಿ ಡಾ.ಎ.ಅಬ್ದುಲ್ ಸಲಾಂ, ವೈದ್ಯರು, ದಾದಿಯರು, ಪಾರಾ ಮೆಡಿಕಲ್ ಸಿಬ್ಬಂದಿ, ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಆಲಪ್ಪುಳ ಸರಕಾರಿ ಮೆಡಿಕಲ್ ಕಾಲೇಜು ಸಿಬ್ಬಂದಿ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆದೇಶ ಪ್ರಕಾರ 4 ದಿನಗಳಲ್ಲಿ ಮೆಡಿಕಲ್ ಕಾಲೇಜನ್ನು ಅತ್ಯಾಧುನಿಕ ಕೋವಿಡ್ ಚಿಕಿತ್ಸಾ ಕೇಂದ್ರವಾಗಿ ಯುದ್ಧ ಕಾಲ ರೀತಿ ಸಜ್ಜುಗೊಳಿಸಲಾಗಿತ್ತು. ಈಗ ಒಬ್ಬ ರೋಗಿ ಮಾತ್ರ ಇಲ್ಲಿ ಚಿಕಿತ್ಸೆಯಲ್ಲಿದ್ದಾರೆ.

