ಬದಿಯಡ್ಕ: ದೇಶದ ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಯಶಸ್ವಿ 1 ವರ್ಷದ ಸಾಧನೆಯ ಕರಪತ್ರವನ್ನು ಬದಿಯಡ್ಕ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಚ್. ಅಬೂಬಕ್ಕರ್ ಅವರಿಗೆ ನೀಡಿ ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಅವರು ಜಿಲ್ಲಾಮಟ್ಟದ ಕರಪತ್ರ ವಿತರಣಾ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ಎಂ. ಸಂಜೀವ ಶೆಟ್ಟಿ ಮೊಟ್ಟೆಕುಂಜ, ಕಾಸರಗೋಡು ಮಂಡಲ ಅಧ್ಯಕ್ಷ ಹರೀಶ್ ನಾರಂಪಾಡಿ, ಬದಿಯಡ್ಕ ಪಂಚಾಯಿತಿ ಸಮಿತಿ ಅಧ್ಯಕ್ಷ ಡಿ.ಶಂಕರ, ಪ್ರಧಾನ ಕಾರ್ಯದರ್ಶಿ ಅವಿನಾಶ್ ರೈ ಜೊತೆಗಿದ್ದರು.

