ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಗಿಂತಲೂ ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವ ಜನರ ಸಂಖ್ಯೆಯೇ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ದೇಶದಲ್ಲಿ ಶೇ.51.08ರಷ್ಟು ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ.
ಕಳದೆ 24 ಗಂಟೆಗಳಲ್ಲಿ 7,419 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಕೊರೊನಾ ವೈರಸ್ ಸೋಂಕು ನಿವಾರಣೆಯಾಗಿರುವವರ ಸಂಖ್ಯೆಯು 1,69,797ಕ್ಕೆ ಏರಿಕೆಯಾಗಿದೆ.ಭಾರತದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತ ಪ್ರಕರಣಗಳಲ್ಲಿ ಅರ್ಧಕ್ಕಿಂತಲೂ ಹೆಚ್ಚು ಮಂದಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ದೇಶದಲ್ಲಿ ಕೊವಿಡ್-19ನಿಂದ ಗುಣಮುಖರಾದವರ ಶೇಕಡಾವಾರು ಪ್ರಮಾಣವು 51.08ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ಕೊರೊನಾವೈರಸ್ ತಪಾಸಣಾ ಲ್ಯಾಬ್ ಗಳ ಸಂಖ್ಯೆ ಏರಿಕೆ:

ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಪಾಸಣೆಗೆ ನಿರ್ದಿಷ್ಟ ಪ್ರಯೋಗಾಲಯಗಳನ್ನು ಗುರುತುಪಡಿಸಲಾಗಿದೆ. ಹೀಗಿ ಗುರುತಿಸಿದ ಲ್ಯಾಬ್ ಗಳ ಸಂಖ್ಯೆಯಲ್ಲಿ ಏರಿಕೆ ಮಾಡಲಾಗಿದೆ. ಸರ್ಕಾರದ 653 ಪ್ರಯೋಗಾಲಯ ಹಾಗೂ 248 ಖಾಸಗಿ ಪ್ರಯೋಗಾಲಯ ಸೇರಿದಂತೆ ಒಟ್ಟು 901 ಪ್ರಯೋಗಾಲಯಗಳಲ್ಲಿ ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ತಪಾಸಣೆಯನ್ನು ನಡೆಸುವುದಕ್ಕೆ ಕೇಂದ್ರ ಸರ್ಕಾರವು ಅನುಮತಿ ನೀಡಿದೆ.