ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಮತ್ತೆ ಹೊಸದಾಗಿ 11,502 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.32 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ 11,502 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದೀಗ ದೇಶದಲ್ಲಿ ಒಟ್ಟಾರೆಯಾಗಿ 3,32,424 ಮಂದಿಯಲ್ಲಿ ಸೋಂಕು ಕಾಣಸಿಕೊಂಡಂತಾಗಿದೆ. ನಿನ್ನೆ ಒಂದೇ ದಿನ 325 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 9520ಕ್ಕೆ ಏರಿಕೆಯಾಗಿದೆ. 3.32 ಲಕ್ಷ ಮಂದಿ ಸೋಂಕಿತರ ಪೈಕಿ 169798 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ಇನ್ನೂ ದೇಶದಲ್ಲಿ 153106 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ ಸೋಂಕಿತರ ಪೈಕಿ ಮಹಾರಾಷ್ಟ್ರ ರಾಜ್ಯದ ಪಾಲೇ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ ಆ ರಾಜ್ಯದಲ್ಲಿ 3390 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,07,958ಕ್ಕೆ ಮುಟ್ಟಿದೆ.
ದೆಹಲಿಯಲ್ಲಿ 2224, ತಮಿಳುನಾಡಿನಲ್ಲಿ 1947, ಗುಜರಾತ್ ನಲ್ಲಿ 511, ಪಶ್ಚಿಮ ಬಂಗಾಳ ರಾಜ್ಯದಲ್ಲಿ 389 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.


