ನವದೆಹಲಿ: ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಒಂದೇ ದಿನ 15,968 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 456183ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್'ಗೆ 465 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 14476ಕ್ಕೆ ತಲುಪಿದೆ. 456183 ಮಂದಿ ಸೋಂಕಿತರ ಪೈಕಿ 2,58,685 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 183022 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಭಾರತದಲ್ಲಿ 1 ಲಕ್ಷ ಜನಸಂಖ್ಯೆಗೆ 1 ಕೊರೋನಾ ಸಾವು ಸಂಭವಿಸುತ್ತಿದೆ. ಜಾಗತಿಕ 6.04ರ ಸಾವಿನ ಸರಾಸರಿಗೆ ಹೋಲಿಸಿದರೆ ಭಾರತದಲ್ಲಿ ಮರಣ ಪ್ರಮಾಣ ಅತ್ಯಂತ ಕಡಿಮೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


