HEALTH TIPS

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 14,821 ಹೊಸ ಪಾಸಿಟಿವ್ ಪ್ರಕರಣ, 445 ಕೊರೋನಾ ಸೋಂಕಿತರ ಸಾವು

     
     ನವದೆಹಲಿ: ಮಾರಕ ಕೊರೋನಾ ವೈರಸ್ ಅಬ್ಬರ ದೇಶಾದ್ಯಂತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಮತ್ತೆ 14,821 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
      ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ 14,821 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,25,282ಕ್ಕೆ ಏರಿಕೆಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ 3870, ದೆಹಲಿಯಲ್ಲಿ 3 ಸಾವಿರ, ತಮಿಳುನಾಡಿನಲ್ಲಿ 2532, ಗುಜರಾತ್ ನಲ್ಲಿ 580 ಮತ್ತು ಕರ್ನಾಟಕದಲ್ಲಿ 453 ಹೊಸ ಪ್ರಕರಣಗಳು ದಾಖಲಾಗಿವೆ.
      ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 445 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13,699ಕ್ಕೆ ಏರಿಕೆಯಾಗಿದೆ.
     ದೇಶಾದ್ಯಂತ ನಿನ್ನೆ 9440 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 2, 37, 196ಕ್ಕೆ ಏರಿಕೆಯಾಗಿದೆ. ಅಲ್ಲದೆ 174,387 ಸಕ್ರಿಯ ಪ್ರಕರಣಗಳಿದ್ದು, ದೇಶಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries