ನವದೆಹಲಿ: 2020-21ನೇ ಸಾಲಿನ ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಸೂಚಿತ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಹೆಚ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್, ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ದರ ಪಡೆಯಲು 2020-21ರ ಮಾರುಕಟ್ಟೆ ಹಂಗಾಮಿನಲ್ಲಿ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.
ಹುಚ್ಚೆಳ್ಳು ಗೆಅತ್ಯಧಿಕ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್ ಗೆ 755 ರೂ, ಹೆಚ್ಚಿಸಲಾಗಿದೆ. ಉದ್ದು ಕಾಳಿಗೆ 300ರೂ, ಹತ್ತಿ ಗೆ 275ರೂ ಹೆಚ್ಚಿಸಲಾಗಿದೆ. ಬೆಳೆ ವೈವಿಧ್ಯತೆಯನ್ನು ಉತ್ತೇಜಿಸುವ ಗುರಿಯೊಂದಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಕಾಶ್ ಜಾವಡೇಕರ್ ಉಪಸ್ಥಿತರಿದ್ದರು.