ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,31,095 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,31,095 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜೂನ್ 27ರವರೆಗೂ 82,27,802 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 19,906 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್'ಗೆ 410 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 16,095ಕ್ಕೆ ತಲುಪಿದೆ.


