ನವದೆಹಲಿ: ಭಾರತದಲ್ಲಿ ಕೊರೋನಾ ರೌದ್ರಾವತಾರ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14,516 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಈ ನಡುವೆ ನಿನ್ನೆ ಒಂದೇ ದಿನ 375 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 12,948ಕ್ಕೆ ಏರಿಕೆಯಾಗಿದೆ. ಇನ್ನು 395048 ಮಂದಿ ಸೋಂಕಿತರ ಪೈಕಿ 213831 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿನ್ನೂ 168269 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 120504ಕ್ಕೆ ಏರಿಕೆಯಾಗಿದ್ದು, 5751 ಮಂದಿ ಮೃತಪಟ್ಟಿದ್ದಾರೆ. ಅದೇ ರೀತಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 49979ಕ್ಕೆ ಏರಿಕೆಯಾಗಿದ್ದು, 1969 ಮಂದಿ ಮೃತಪಟ್ಟಿದ್ದಾರೆ. ಇನ್ನು ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 5449ಕ್ಕೆ ಏರಿಕೆಯಾಗಿದೆ. ಸಮಾಧಾನಕರ ಸಂಗತಿಯೆಂದರೆ ದೇಶದಲ್ಲಿ 8463 ಮಂದಿ ಗುಣಮುಖರಾಗುವುದರೊಂದಿಗೆ ಈ ವರೆಗೆ ಗುಣಮುಕರಾದವರ ಸಂಖ್ಯೆ 2,.08,931ಕ್ಕೆ ತಲುಪಿದೆ.


