ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದವರೆದಿದ್ದು, ಕಳೆದ 24 ಗಂಟೆಗಳಲ್ಲಿ 9,985 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,76,583ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
ಈ ನಡುವೆ ದೇಶದಲ್ಲಿ ನಿನ್ನೆ ಒಂದೇ ದಿನ 279 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 7,745ಕ್ಕೆ ಏರಿಕೆಯಾಗಿದೆ. 276583 ಮಂದಿ ಪೈಕಿ 1,35,206 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇನ್ನೂ ದೇಶದಲ್ಲಿ 1,35,206 ಮಂದಿ ಸೋಂಕಿನಂದ ಬಳಲುತ್ತಿದ್ದಾರೆ.
ಮಹಾರಾಷ್ಟ್ರ ರಾಜ್ಯದಲ್ಲಿ ನಿನ್ನೆ ಒಂದೇ ದಿನ 2251 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90787ಕ್ಕೆ ತಲುಪಿದೆ. ಉಳಿದಂತೆ ತಮಿಳುನಾಡಿನಲ್ಲಿ 1685, ದೆಹಲಿಯಲ್ಲಿ 1007 ಹೊಸ ಪ್ರಕರಣಗಳು ದಾಖಲಾಗಿವೆ.


