HEALTH TIPS

ಕೊರೋನಾ ವೈರಸ್: ಭಾರತದಲ್ಲಿ 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

   
      ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ಇದೀಗ 3 ಲಕ್ಷ ಗಡಿ ದಾಟಿದೆ.
      ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 3,04,019ಕ್ಕೆ ಏರಿಕೆಯಾಗಿದ್ದು, ಇಂದು ಒಂದೇ ದಿನ ಭಾರತದಲ್ಲಿ ದಾಖಲೆಯ 396 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 8,498ಕ್ಕೆ ಏರಿಕೆಯಾಗಿದೆ.
      ಈಗಾಗಲೇ ಭಾರತ ಗರಿಷ್ಠ ಸೋಂಕಿತರ ಸಂಖ್ಯೆಯಲ್ಲಿ ಇಟಲಿಯನ್ನು ಹಿಂದಿಕ್ಕಿ ವಿಶ್ವದ 4ನೇ ಸ್ಥಾನಕ್ಕೇರಿದೆ. ಇದೀಗ ಮತ್ತೆ ಭಾರತದಲ್ಲಿ ಸಾವಿರಾರು ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿರುವುದು ಅತಂಕದ ವಿಚಾರವಾಗಿದೆ.
     ಪ್ರಮುಖವಾಗಿ ಮಹಾರಾಷ್ಟ್ರ, ದೆಹಲಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ದೇಶದ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ. ದೇಶದಲ್ಲಿ ಈವರೆಗೂ 1,47,195 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿನ ಸೋಂಕಿತರ ಗುಣಮುಖ ಪ್ರಮಾಣ ಶೇ.49.47ಕ್ಕೆ ಏರಿಕೆಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries