HEALTH TIPS

ಗರೀಬ್ ಕಲ್ಯಾಣ್: 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯಡಿ ವಲಸೆ ಕಾರ್ಮಿಕರಿಗೆ ಉದ್ಯೋಗ

   
     ನವದೆಹಲಿ: 50 ಸಾವಿರ ಕೋಟಿ ರೂ ಮೌಲ್ಯದ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
        ಇದೇ ಜೂನ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು, ಗರೀಬ್ ಕಲ್ಯಾಣ್ ಯೋಜನೆಗೆ ಚಾಲನೆ ನೀಡಲಿದ್ದು, ಇದೇ ವಿಚಾರವಾಗಿ ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಗರೀಬ್ ಕಲ್ಯಾಣ ರೋಜ್ ಗಾರ್ ಅಭಿಯಾನದಡಿಯಲ್ಲಿ ಕೇಂದ್ರ ಸರ್ಕಾರ ಸುಮಾರು 50 ಸಾವಿರ ಕೋಟಿ ಮೌಲ್ಯದ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇದರಲ್ಲಿ ದೇಶದ ಸಾವಿರಾರು ವಲಸೆ ಕಾರ್ಮಿಕರಿಗೆ ಉದ್ಯೋಗ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
      ಈ ಹಿಂದೆ ಕೊರೋನಾ ವೈರಸ್ ಲಾಕ್ಡೌನ್ ನಿಂದಾಗಿ ಕೆಲಸ ಬಿಟ್ಟು ತವರು ಸೇರಿದ್ದ ಸುಮಾರು 25 ಸಾವಿರ ವಲಸೆ ಕಾರ್ಮಿಕರನ್ನು ಯೋಜನೆ ನಿಮಿತ್ತ ಆಯ್ಕೆ ಮಾಡಲಾಗಿದೆ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾಖರ್ಂಡ್ ಮತ್ತು ಒಡಿಶಾದ 116 ಜಿಲ್ಲೆಗಳ 25 ಸಾವಿರ ವಲಸೆ ಕಾರ್ಮಿಕರು ಕೇಂದ್ರ ಸರ್ಕಾರದ ಈ ಅಭಿಯಾನದ ಭಾಗವಾಗಿರಲಿದ್ದಾರೆ ಎಂದು ಹೇಳಿದರು.
     ಕೇಂದ್ರ ಸರ್ಕಾರದ ಈ ಯೋಜನೆಯಡಿಯಲ್ಲಿ 25 ಸಾವಿರ ವಲಸೆ ಕಾರ್ಮಿಕರು ಆರು ವಿವಿಧ ಕಾಮಗಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ವಾರ್ಷಿಕ 125 ದಿನಗಳ ಕಾಲ ಅವರಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries