ಲಂಡನ್: ವಿಶ್ವದಾದ್ಯಂತ ಕೊರೋನಾ ಆರ್ಭಟ ಹೆಚ್ಚುತ್ತಲೇ ಇದ್ದು, ಈ ವರೆಗೂ 70 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದಾರೆಂದು ಜಾನ್ಸ್ ಹಾಪ್‍ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿ ಎಸ್ ಎಸ್ ಇ) ತಿಳಿಸಿದೆ.
ಕೊವಿಡ್-19 ಸೋಂಕಿನಿಂದ ಇದುವರೆಗೆ 405,074 ಜನರು ಬಲಿಯಾಗಿದ್ದಾರೆ ಎಂದು ವಿಶ್ವವಿದ್ಯಾಲಯ ಹೇಳಿದೆ. ಅಮೆರಿಕವೊಂದರಲ್ಲೇ ವೈರಸ್‍ನಿಂದಾಗಿ 112,469 ಜನರು ಸಾವನ್ನಪ್ಪಿದ್ದರೆ, ಯುನೈಟೆಡ್ ಕಿಂಗ್‍ಡಮ್ ನಲ್ಲಿ 40,542, ಬ್ರೆಜಿಲ್ ನಲ್ಲಿ 37,312 ಮಾರಕ ಸೋಂಕಿಗೆ ಬಲಿಯಾಗಿದ್ದಾರೆ.
ವಿಶ್ವದಾದ್ಯಂತ ಕೊವಿಡ್ ಸೋಂಕು ಪ್ರಕರಣಗಳ ಸಂಖ್ಯೆ 70 ಲಕ್ಷ ಗಡಿ ದಾಟಿದ್ದು, ಈ ಮಧ್ಯೆ, 3,462,185 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.


