HEALTH TIPS

83 ದಿನಗಳ ಬಳಿಕ ಇಂಧನ ದರ ಪರಿಷ್ಕರಣೆ ಆರಂಭ; ಪೆಟ್ರೋಲ್, ಡೀಸೆಲ್ ದರ ಏರಿಕೆ!

 
          ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಸೇರಿದಂತೆ ಸತತ 83 ದಿನಗಳ ವಿರಾಮದ ಬಳಿಕ ದೇಶಾದ್ಯಂತ ಇಂಧನ ದರ ಪರಿಷ್ಕರಣೆ ಪುನಾರಂಭಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದೆ.
            ಕೊರೋನಾ ವೈರಸ್ ಲಾಕ್ ಡೌನ್ ಮುಕ್ತಾಯದ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ದೈನಂದಿನ ಬೆಲೆ ಪರಿಷ್ಕರಣೆಯನ್ನು ಪುನರಾರಂಭಿಸಿದ್ದು, ಭಾನುವಾರ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ತಲಾ 60 ಪೈಸೆ ಏರಿಕೆಯನ್ನು ಮಾಡಲಾಗಿದೆ. ಅದರಂತೆ ದೆಹಲಿಯಲ್ಲಿ ಶನಿವಾರ ಪ್ರತಿ ಲೀ.ಗೆ 71.26 ರೂ.ಇದ್ದು ಪೆಟ್ರೋಲ್ ಬೆಲೆ ಭಾನುವಾರ 71.86 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 69.39 ರೂ.ನಿಂದ 69.99 ರೂ.ಗೆ ಏರಿಕೆಯಾಗಿದೆ.
          ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಎಟಿಎಫ್ ಮತ್ತು ಎಲ್‍ಪಿಜಿ ಬೆಲೆಗಳನ್ನು ನಿಯಮಿತವಾಗಿ ಪರಿಷ್ಕರಿಸುತ್ತಿದ್ದರೂ ಮೇಲ್ನೋಟಕ್ಕೆ ಕಂಡು ಬಂದಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೀವ್ರ ಏರಿಳಿತದ ಹಿನ್ನೆಲೆಯಲ್ಲಿ ಮಾ.16ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆಯನ್ನು ತಡೆಹಿಡಿದಿದ್ದವು. ಇದಕ್ಕೂ ಮುನ್ನ ಜಾಗತಿಕ ಬೆಲೆ ಕುಸಿತದ ಲಾಭವನ್ನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರವು ಇವೆರಡೂ ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀ.ಗೆ ತಲಾ ಮೂರು ರೂ.ಗಳಷ್ಟು ಹೆಚ್ಚಿಸಿತ್ತು. ಮೇ 6ರಂದು ಸರ್ಕಾರ ಮತ್ತೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀ.ಗೆ 10 ರೂ. ಮತ್ತು ಡೀಸೆಲ್‍ಗೆ 13 ರೂ.ಹೆಚ್ಚಿಸಿತ್ತು. ಜಾಗತಿಕ ಕಚ್ಚಾ ತೈಲ ಬೆಲೆಗಳು ಕುಸಿದಿದ್ದ ಹಿನ್ನೆಲೆಯಲ್ಲಿ ತೈಲ ಮಾರಾಟ ಕಂಪನಿಗಳು ಈ ಏರಿಕೆಯನ್ನು ಗ್ರಾಹಕರಿಗೆ ವರ್ಗಾಯಿಸಿರಲಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries