ತಿರುವನಂತಪುರ : ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಮತ್ತು ಡಿವೈಎಫ್‍ಐ ರಾಷ್ಟ್ರೀಯ ಅಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಅವರ ವಿವಾಹ ಸೋಮವಾರ ತಿರುವನಂತಪುರದಲ್ಲಿ ನಡೆಯಿತು.
ಸಿಎಂ ಪಿಣರಾಯಿ ವಿಜಯನ್ ಅಧಿಕೃತ ನಿವಾಸದಲ್ಲಿ ಬೆಳಗ್ಗೆ 10.30ಕ್ಕೆ ಇವರಿಬ್ಬರು ರಿಜಿಸ್ಟರ್ ಮದುವೆಯಾದರು. ಸಿಎಂ ಸರ್ಕಾರಿ ನಿವಾಸದಲ್ಲಿ ನಡೆದ ಮೊದಲ ಮದುವೆ ಇದಾಗಿದೆ. ವಿವಾಹ ಕಾರ್ಯಕ್ರಮದಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರು ಮಾತ್ರ ಭಾಗವಹಿಸಿದ್ದರು.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹಿರಿಯ ಮಗಳು ವೀಣಾ ಮೊಹಮ್ಮದ್ ರಿಯಾಜ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಇಬ್ಬರಿಗೂ ಇದು ಎರಡನೇ ವಿವಾಹವಾಗಿದೆ. ವೀಣಾ ಬೆಂಗಳೂರಿನ ಐಟಿ ಕಂಪನಿಯೊಂದರ ನಿರ್ದೇಶಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರಿಯಾಸ್ ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯ ರಂಗ ಪ್ರವೇಶಿಸಿದ್ದರು.


