ಕಾಸರಗೋಡು: ಕಾಸರಗೋಡು ಸಹಿತ ಕೇರಳದ ಕೆಲವು ಜಿಲ್ಲೆಗಳಲ್ಲಿ ನಾಳೆ ಯಿಂದ ಮೂರು ದಿನ ಬಿರುಸಿನ ಮಳೆ ಸುರಿಯುವ ಸಾಧ್ಯತೆಯಿದ್ದು, ಎಲ್ಲೋ ಅಲೆರ್ಟ್ ಘೋಷಿಸಲಾಗಿದೆ.
ಕಾಸರಗೋಡು ಸಹಿತ ಕೇರಳದ ಕೆಲವು ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯುವ ಸಾಧ್ಯತೆಯಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಲ್ಲಿನ ಕೆಲವು ಪ್ರದೇಶಗಳಲ್ಲಿ ಮುಂದಿನ 24 ತಾಸುಗಳಲ್ಲಿ 64.5 ಎಂ.ಎಂ.ನಿಂದ 115.5 ಎಂ.ಎಂ. ವರೆಗೆ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಕೇಂದ್ರ ಹವಾಮಾನ ನಿಗಾ ಇಲಾಖೆ ವರದಿ ಮಾಡಿದೆ.


