HEALTH TIPS

ಸಿಬ್ಬಂದಿಗೆ ಕೋವಿಡ್ ಸೋಂಕು; ಪೊಲೀಸ್ ಠಾಣೆಯ ಎಲ್ಲರಿಗೂ ಕ್ವಾರಂಟೈನ್

        ತಿರುವನಂತಪುರಂ : ಕೇರಳದಲ್ಲಿ 32 ವರ್ಷದ ಪೊಲೀಸ್ ಸಿಬ್ಭಂದಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ. ಇದರಿಂದಾಗಿ ಪೊಲೀಸ್ ಠಾಣೆಯ 59 ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಕಳುಹಿಸಲಾಗಿದೆ.
     ಏರ್ನಾಕುಲಂ ಜಿಲ್ಲೆಯ ಕಲಾಮಸ್ಸೇರಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬುದು ಗುರುವಾರ ಪತ್ತೆಯಾಗಿತ್ತು. ಪೊಲೀಸ್ ಠಾಣೆಯನ್ನು ಶುಕ್ರವಾರ ಸ್ಯಾನಿಟೈಸ್ ಮಾಡಲಾಗಿದೆ.
    ಈ ಪೊಲೀಸ್ ಠಾಣೆಯಲ್ಲಿ ಸೋಂಕಿತ ಸಿಬ್ಬಂದಿ ಜೊತೆ ಕೆಲಸ ಮಾಡಿದ 59 ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಕಳುಹಿಸಲಾಗಿದೆ. ಬೇರೆ ಠಾಣೆಯ ಸಿಬ್ಬಂದಿಗಳನ್ನು ಈ ಠಾಣೆಯ ಕೆಲಸಕ್ಕಾಗಿ ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪೊಲೀಸ್ ಸಿಬ್ಬಂದಿ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ಪರೀಕ್ಷೆ ನಡೆಸಲು ಸಹ ತೀರ್ಮಾನಿಸಲಾಗಿದೆ. ಕೋವಿಡ್ -19 ಕರ್ತವ್ಯದಲ್ಲಿರುವ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಫೇಸ್ ಶೀಲ್ಡ್ ನೀಡಲು ತೀರ್ಮಾನಿಸಲಾಗಿದೆ.
   ಕೋವಿಡ್ - 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕನ್‌ವೆಕ್ಷನ್‌ ಸೆಂಟರ್‌ ಅನ್ನು ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಸಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಏರ್ನಾಕುಲಂ ಜಿಲ್ಲೆಯಲ್ಲಿ ಪ್ರಸ್ತುತ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 104. ರಾಜ್ಯದಲ್ಲಿ 1343 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟರ ಸಂಖ್ಯೆ 22.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries