ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಶನಿವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಕೋವಿಡ್ -19 ಸಾಂಕ್ರಾಮಿಕ ರೋಗದ ಪರಿಸ್ಥಿತಿಯನ್ನು ಪರಿಶೀಲಿಸಲು ಕರೆಯಲ್ಪಟ್ಟ ಈ ಸಭೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸೋಂಕಿನ ಸ್ಥಿತಿಗತಿಯ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ, ಮುಂದಿನ ಲಾಕ್‍ಡೌನ್ ಕುರಿತು ಮಾರ್ಗಸೂಚಿ ಮತ್ತು ಹೆಚ್ಚಿನ ಸಾಂಕ್ರಾಮಿಕ ಸೋಂಕಿನ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ದೆಹಲಿ ಸೇರಿದಂತೆ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೊರೋನಾ ಪ್ರಕರಣಗಳ ಬಗ್ಗೆ ಮೋದಿ ಅವರು ಮಾಹಿತಿ ಪಡೆದುಕೊಂಡರು ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಭೆಯಲ್ಲಿ ಗೃಹ ಸಚಿವರು, ಆರೋಗ್ಯ ಸಚಿವರು, ಪ್ರಧಾನ ಮಂತ್ರಿ ಪ್ರಧಾನ ಕಾರ್ಯದರ್ಶಿ, ಕ್ಯಾಬಿನೆಟ್ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ, ಐಸಿಎಂಆರ್ ಡಿಜಿ ಮತ್ತು ಇತರ ಉನ್ನತ ಗುಂಪುಗಳು ಭಾಗವಹಿಸಿದ್ದರು.


