ಮಧೂರು: ಕೋವಿಡ್ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ನ್ಯಾಶನಲ್ ವಿಶ್ವಕರ್ಮ ಫೆಡರೇಶನ್ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಸಮಾಜದ ನಿರ್ಗತಿಕ ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
ಸಭೆಯಲ್ಲಿ ಜಿಲ್ಲಾಧ್ಯಕ್ಷ ಚಂದ್ರನ್ ಆರ್ಟಿಸ್ಟ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಧ್ಯಕ್ಷ ಸೀತಾರಾಮ ಆಚಾರ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವನ್ ಕೊಳತ್ತೂರು, ರಾಜ್ಯ ಸಮಿತಿ ಆರ್ಗನೈಸಿಂಗ್ ಕಾರ್ಯದರ್ಶಿ ರಾಜನ್ ಮನ್ನಿಪ್ಪಾಡಿ, ಜಿಲ್ಲಾ ಉಪಾಧ್ಯಕ್ಷರಾದ ವಿಜಯನ್ ಪಿ.ಕೆ., ಕಾರ್ಯದರ್ಶಿ ರಾಧಾಕೃಷ್ಣನ್, ನಾಗರಾಜ ಆಚಾರ್ಯ, ಸೊಸೈಟಿ ಕಾರ್ಯದರ್ಶಿ ವಿಜಯ ರಾಜನ್ ಮೊದಲಾದವರು ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ರಾಘವನ್ ದೊಡ್ಡುವಯಲ್ ಸ್ವಾಗತಿಸಿ, ಪುರುಷೋತ್ತಮ ಆಚಾರ್ಯ ಬದಿಯಡ್ಕ ವಂದಿಸಿದರು.


