HEALTH TIPS

ಪ್ರಜ್ಞಾ ಸಿಂಗ್ ಠಾಕೂರ್ ಗೆ ಅನಾರೋಗ್ಯ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಕುಸಿದು ಬಿದ್ದ ಭೋಪಾಲ್ ಸಂಸದೆ

       
          ಭೋಪಾಲ್: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಕಾರ್ಯಕ್ರಮವೊಂದರಲ್ಲಿ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿ ಕುಸಿದು ಬಿದ್ದಿದ್ದಾರೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನ ಉದ್ಘಾಟನೆಗೆ ಆಗಮಿಸಿದ್ದ ಸಂಸದೆ ಪ್ರಜ್ಞಾ ಸಿಂಗ್ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.  ನಂತರ ಅಲ್ಲಿದ್ದ ಕಾರ್ಯಕರ್ತರು ಆಕೆಯನ್ನು  ಕುರ್ಚಿಯ ಮೇಲೆ ಕುಳಿತುಕೊಳ್ಳುವುದಕ್ಕೆ ಸಹಕರಿಸಿದ್ದಾರೆ.
          ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯದಿನವಾಗಿರುವ ಮಂಗಳವಾರ ಗೌರವ ಸಲ್ಲಿಸಲು ಸಂಸದೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಏತನ್ಮಧ್ಯೆ, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜನ ಸಂಘದ ಸಂಸ್ಥಾಪಕ ಡಾ.ಶ್ಯಾಮ್ ಸಾದ್ ಮುಖರ್ಜಿ ಅವರಿಗೆ ಗೌರವ ಸಲ್ಲಿಸಿದರು
      ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸಂಸ್ಮರಣಾ ದಿನದಂದು  ಭಾರತದ ಶ್ರೇಷ್ಠ ಪುತ್ರನಿಗೆ ನನ್ನ ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries