ಕಾಸರಗೋಡು: ಪಾಣತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನು ಮುಂದೆ ಕುಟುಂಬ ಆರೋಗ್ಯ ಕೇಂದ್ರವಾಗಿ ಬಡ್ತಿ ಪಡೆಯಲಿದೆ.
ಬಡ್ತಿಯ ಘೋಷಣೆ ಮತ್ತು ನೂತನ ಕಟ್ಟಡದ ಉದ್ಘಾಟನೆ ಇಂದು(ಜೂ.8) ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ನಡೆಯುವ ಸಮಾರಂಭವನ್ನು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್ ಉದ್ಘಾಟಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು.