ಮಂಜೇಶ್ವರ: ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಶ್ರೀ ಕ್ಷೇತ್ರ ಚಕ್ರತೀರ್ಥ ಪುನರ್‍ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿರುತ್ತಾರೆ. ಡಿ.ಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ ಅವರು ಕ್ಷೇತ್ರದ ಪುನರ್‍ನಿರ್ಮಾಣ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ವಿಭಾಗ ಮೇಲ್ವಿಚಾರಕ ಸಚಿನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕ ಮಂಜುನಾಥ ಭಟ್, ವಿದ್ಯಾನಿಕೇತನದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯಧ್ಯಕ್ಷ ಹರೀಶ್ ಶೆಟ್ಟಿ ಮಾಡ, ಆನಂದ ಶೆಟ್ಟಿ ಸನ್ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಧನ
0
ಜೂನ್ 10, 2020