ನವದೆಹಲಿ: ಹಿಟ್ ಅಂಡ್ ರನ್ ಅಪಘಾತಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಇಸ್ಲಾಮಾಬಾದ್‍ನ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಪಾಕಿಸ್ತಾನ ಸೋಮವಾರ ಸಂಜೆ ಬಿಡುಗಡೆ ಮಾಡಿದೆ.
ಅಧಿಕಾರಿಗಳ ಬಂಧನಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಇಂದು ಪಾಕಿಸ್ತಾನ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕರೆಸಿ ತೀವ್ರ ಪ್ರತಿಭಟನೆ ದಾಖಲಿಸಿತ್ತು. ಇದರ ಬೆನ್ನಿಗೆ ಇಬ್ಬರೂ ಭಾರತೀಯ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. "ಹಿಟ್ ಅಂಡ್ ರನ್ ಅಪಘಾತ" ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಇಬ್ಬರು ಭಾರತೀಯ ಸಿಬ್ಬಂದಿಯನ್ನು ಪಾಕಿಸ್ತಾನದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮ ವರದಿ ಮಾಡಿದ್ದವು. ಈ ಪ್ರಕರಣ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.
ಇತ್ತೀಚೆಗೆ ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್‍ಐ ಪಾಕಿಸ್ತಾನದಲ್ಲಿರುವ ಭಾರತದ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ವರದಿಯಾಗಿತ್ತು. ಜೊತೆಗೆ ಹಂಗಾಮಿ ರಾಯಭಾರಿ ಗೌರವ್ ಅಹ್ಲುವಾಲಿಯಾ ಮನೆ ಸುತ್ತಮುತ್ತ ಐಎಸ್‍ಐ ತನ್ನ ಚಟುವಟಿಕೆ ಹೆಚ್ಚಿಸಿದೆ ಎಂದೂ ವರದಿಯಾಗಿತ್ತು.