ಕಾಸರಗೋಡು: ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಅರಣ್ಯ ಇಲಾಖೆ ನೇತೃತ್ವದಲ್ಲಿ ನಡೆದ ಸಸಿ ನೆಡುವಿಕೆ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನೆ ಜರುಗಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎನ್.ಎ.ನೆಲ್ಲಿಕುನ್ನು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಅಕ್ಷರ ಗ್ರಂಥಾಲಯ ನೇತೃತ್ವದಲ್ಲಿ ಪರಿಸರ ದಿನಾಚರಣೆ ಜರುಗಿತು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.





