ಉಪ್ಪಳ: ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ವಿಶ್ವಪರಿಸರ ದಿನವನ್ನು ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಪಾವಲುಕೋಡಿ ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಇಬ್ರಾಹಿಂ ಬುಡ್ರಿಯ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಮೇಶ್ ಪೈವಳಿಕೆ, ಪ್ರಾಂಶುಪಾಲ ವಿಶ್ವನಾಥ ಕುಂಬಳೆ, ರಫೀಕ್ ಮಾಸ್ತರ್ ಪೈವಳಿಕೆ ಉಪಸ್ಥಿತರಿದ್ದರು. ರಮೇಶ್ ಪೈವಳಿಕೆ ಗಿಡ ನೀಡಿ ಸಹಕರಿಸಿದರು.


