HEALTH TIPS

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಕೊರೋನಾ ಪಾಸಿಟಿವ್

 
           ನವದೆಹಲಿ: ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಎರಡನೇ ಬಾರಿ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ.
        ಮೊನ್ನೆ ಮೊದಲ ಬಾರಿ ಸತ್ಯೇಂದ್ರ ಜೈನ್ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬಂದಿತ್ತು. ಆದರೆ ಜ್ವರ ವಿಪರೀತವಾಗಿದ್ದರಿಂದ ನಿನ್ನೆ ಮತ್ತೊಮ್ಮೆಕೊವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದರು. ಆರೋಗ್ಯ ಸಚಿವರಿಗೆ ಎರಡನೇ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಬೆಳಗ್ಗೆ ಆಮ್ ಆದ್ಮಿ ಪಕ್ಷದ ಮುಖಂಡೆ ಆತಿಶಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಆಪ್ ಸರ್ಕಾರದ ಸಚಿವರಿಗೂ ಪಾಸಿಟಿವ್ ಬಂದಿದೆ.
      ಕಳೆದ ಎರಡು ದಿನಗಳ ಹಿಂದಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸತ್ಯೇಂದ್ರ ಜೈನ್ ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries