ಕಾಸರಗೋಡು: ಕರ್ನಾಟಕದ ಹತ್ತನೇ ತರಗತಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಸರಗೋಡಿನ ವಿದ್ಯಾರ್ಥಿಗಳಿಗೆ ಯಾವುದೇ ಆತಂಕ ಬೇಡವೆಂದು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ತಿಳಿಸಿದ್ದಾರೆ.
ಪರೀಕ್ಷೆ ಬರೆಯಲು ಅಗತ್ಯವಾದ ಎಲ್ಲಾ ನೆರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರುಗಳು ಮಾಡುವ ಬಗ್ಗೆ ಭರವಸೆ ನೀಡಿದ್ದಾರೆಂದು ಶ್ರೀಕಾಂತ್ ಹೇಳಿದರು. ಗಡಿನಾಡಿನ ವಿದ್ಯಾರ್ಥಿ-ವಿದ್ಯಾರ್ಥಿನಿಗಳಿಗೆ ಪರೀಕ್ಷೆ ಬರೆಯಲು ಎಲ್ಲಾ ನೆರವನ್ನು ಕರ್ನಾಟಕ ಸರ್ಕಾರ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಜೊತೆ ನಡೆಸಿದ ಮಾತುಕತೆಯಲ್ಲಿ ಸ್ಪಷ್ಟ ಭರವಸೆ ದೊರಕಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಮತಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಯಾವುದೇ ತೊಂದರೆ ಬರದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆಂದು ಅವರು ಹೇಳಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ. ಎಂ. ಕಾಸರಗೋಡು ಜಿಲ್ಲಾಧ್ಯಕ್ಷ ಕೆ ಶ್ರೀಕಾಂತ್ ಸಹಿತ ಎರಡೂ ಜಿಲ್ಲೆಗಳ ನೇತಾರರು ಈ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ.


