ಕುಂಬಳೆ: ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯು ಪ್ರಸ್ತುತ ವರ್ಷದ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಪರೀಕ್ಷಾ ಕೇಂದ್ರಗಳನ್ನು ಕರ್ನಾಟಕದ ವಿವಿಧೆಡೆಗಳಲ್ಲಿ ಆರಂಭಿಸಲು ಒಪ್ಪಿಗೆ ನೀಡಿದ್ದು ಕಾಸರಗೋಡು ಕನ್ನಡ ಹೋರಾಟ ಸಮಿತಿಯ ನಿರಂತರ ಪರಿಶ್ರಮದ ಫಲವಾಗಿ ಇದು ಸಾಕಾರಗೊಂಡಿದ್ದು ಪ್ರಶಂಸೆಗೆ ಪಾತ್ರವಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಗಡಿನಾಡಿನ ವಿದ್ಯಾರ್ಥಿಗಳು ಕರ್ನಾಟಕ ಪ್ರವೇಶ ಪರೀಕ್ಷೆ ಬರೆಯಲು ಬೆಂಗಳೂರಿಗೆ ತೆರಳಲಾಗದೆ ತೊಳಲುತ್ತಿರುವುದನ್ನು ಮನಗಂಡು ಕನ್ನಡ ಹೋರಾಟ ಸಮಿತಿಯು ಕರ್ನಾಟಕದ ಮುಖ್ಯಮಂತ್ರಿ ಫ್ರೌಢಶಿಕ್ಷಣ, ಉನ್ನತ ಶಿಕ್ಷಣ ಸಹಿತ ಎಲ್ಲಾ ಸಚಿವರಿಗೆ ಮನವಿ ನೀಡಿ ಪೋನ್ ಮೂಲಕ ಗಡಿನಾಡಿಗೆ ತಾಗಿಕೊಂಡಿರುವ ಜಿಲ್ಲೆಗಳಲ್ಲಿ ಪರೀಕ್ಷಾ ಸೆಂಟರ್ ಗೆ ನಿರಂತರ ಮನವಿ ನೀಡುವ ಮೂಲಕ ಒತ್ತಾಯಿಸಿತ್ತು.
ಪ್ರಸ್ತುತ ಕರ್ನಾಟಕ ಸರ್ಕಾರವು ಮಂಗಳೂರು ಸಹಿತ ಕರ್ನಾಟಕದ ವಿವಿಧ ಗಡಿ ಜಿಲ್ಲೆಗಳಲ್ಲಿ ಕೇರಳ, ತಮಿಳುನಾಡು ಸಹಿತ ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ಪರೀಕ್ಷೆ ಬರೆಯಲು ಅನುಮತಿ ನೀಡಿದೆ. ಕನ್ನಡ ಹೋರಾಟ ಸಮಿತಿ ಕರ್ನಾಟಕ ಸರ್ಕಾರವನ್ನು ಮುಕ್ತಕಂಠದಿಂದ ಪ್ರಶಂಸಿಸಿದೆ.
ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಎಂಬ ಜಾಲತಾಣದಲ್ಲಿ ಜೂ.29 ರ ಮೊದಲು ಸಲ್ಲಿಸಲು ಕರ್ನಾಟಕ ಶಿಕ್ಷಣ ಇಲಾಖೆ ಸೂಚಿಸಿದೆ.


