ಉಪ್ಪಳ: ವಿಶ್ವ ಪರಿಸರ ದಿನದ ಅಂಗವಾಗಿ ಸಜಂಕಿಲ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಪರಿಸರದಲ್ಲಿ ಹಲವು ಬಗೆಯ ಸಸಿಗಳನ್ನು ವಿತರಿಸಲಾಯಿತು.
ಈ ಸಂದರ್ಭ ಸಜಂಕಿಲದ ಹಲವು ಕಡೆಗಳಲ್ಲಿ ಸ್ಥಳೀಯರು ಸಸಿಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ಪೈವಳಿಕೆ ಗ್ರಾಮ ಪಂಚಾಯತಿ ಸದಸ್ಯ ಸುಬ್ರಹ್ಮಣ್ಯ ಭಟ್ ಆಟಿಕುಕ್ಕೆ, ಸದಾನಂದ ಬಾಯಾರು, ಶ್ರೀರಾಮ ಮಾಸ್ತರ್ ಮತ್ತಿತರರು ಉಪಸ್ಥಿತರಿದ್ದರು.





