ಮಂಜೇಶ್ವರ:ಕೋವಿಡ್ ಲಾಕ್ ಡೌನ್ ಬಿಕ್ಕಟ್ಟಿನ ಮಧ್ಯೆಯೂ ಮಹಲ್ ನಿವಾಸಿಗಳಾದ ದಾನಿಗಳು ಮದ್ರಸ ವಿದ್ಯಾರ್ಥಿಗಳಿಗೆ ಉಚಿತ ಪಾಠ ಪುಸ್ತಕಗಳನ್ನು ವಿತರಿಸಿ ಮಾದರಿಯಾಗಿದ್ದಾರೆ.
ಮಂಜೇಶ್ವರ ಪಂಚಾಯತಿನ ಎರಡನೇ ವಾರ್ಡು ವ್ಯಾಪ್ತಿಯಲ್ಲಿರುವ ತೂಮಿನಾಡು ಸಿರಾಜುಲ್ ಇಸ್ಲಾಂ ಮದ್ರಸದ ಒಂದನೇ ತರಗತಿಯಿಂದ ಐದನೇ ತರಗತಿ ತನಕದ ವಿದ್ಯಾರ್ಥಿಗಳಿಗೆ ದಾನಿಗಳು ಸುಮಾರು 30 ಸಾವಿರ ರೂ ವ್ಯಹಿಸಿ ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ.
ಬುಧವಾರದಂದು ಬೆಳಿಗ್ಗೆ ಸಿರಾಜುಲ್ ಇಸ್ಲಾಂ ಮದ್ರಸದಲ್ಲಿ ಮದ್ರಸ ಸದರ್ ಮುಹಲ್ಲಿಂ ಅಬ್ದುಲ್ ರವೂಫ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅಲ್ ಫತಾಹ್ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ಎ ಆರ್ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಿ ಉದ್ಘಾಟಿಸಿದರು.
ಈ ಸಂದರ್ಭ ಮಸೀದಿ ಕಮಿಟಿ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ , ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಲತೀಫ್ ಬಾಬಾ , ಎ ಕೆ ಬಶೀರ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು. ದಾನಿಗಳ ಸೇವೆಗೆ ಸ್ಥಳೀಯರಿಂದ ಪ್ರಶಂಸೆಗಳು ವ್ಯಕ್ತವಾಗಿವೆ.


