ಅಸಮರ್ಪಕ ಆನ್‍ಲೈನ್ ತರಗತಿ : ಸಮಸ್ಯೆ ಪರಿಹರಿಸಲು ಅಂಬೇಡ್ಕರ್ ವಿಚಾರ ವೇದಿಕೆಯಿಂದ ಮುಖ್ಯಮಂತ್ರಿಗೆ ಮನವಿ
ಬದಿಯಡ್ಕ: ಕೇರಳ ಶಿಕ್ಷಣ ಇಲಾಖೆ ಜಾರಿಗೊಳಿಸಿದ ಆನ್‍ಲೈನ್ ಕಲಿಕಾ ವ್ಯವಸ್ಥೆ ಅಸಮರ್ಪಕವಾಗಿದ್ದು, ಜಿಲ್ಲೆಯ ಕನ್ನಡ ವಿದ್ಯಾರ್ಥಿಗಳು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಬದಿಯಡ್ಕದ ಅಂಬೇಡ್ಕರ್ ವಿಚಾರ ವೇದಿಕೆ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ವಿನಂತಿಸಿದೆ.
ಈಗಾಗಲೇ ಮಲಯಾಳ, ಇಂಗ್ಲೀಷ್ ಮಾಧ್ಯಮದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿ ತರಗತಿ ಪ್ರಾರಂಭವಾಗಿದ್ದು, ಕನ್ನಡ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದಾರೆ. ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೆ ಸಂವಿಧಾನಾತ್ಮಕ ಸವಲತ್ತುಗಳಿದ್ದು, ರಾಜ್ಯ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಕನ್ನಡದಲ್ಲೂ ಆನ್‍ಲೈನ್ ತರಗತಿಗಳನ್ನು ಕೂಡಲೇ ಪ್ರಾರಂಭಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದೆ.
ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿರುವ ಜಿಲ್ಲೆಯ ಪರಿಶಿಷ್ಟ ಜಾತಿ-ವರ್ಗದ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರೂ ಕನ್ನಡಿಗರು. ಟಿ.ವಿ., ಸ್ಮಾರ್ಟ್‍ಫೆÇೀನ್ ಇಲ್ಲದ ಮತ್ತು ಸಮರ್ಪಕ ರೇಂಜ್ ಸಿಗದ ವಿದ್ಯಾರ್ಥಿಗಳಿರುವ ಹಲವು ಕುಟುಂಬಗಳು ಜಿಲ್ಲೆಯಲ್ಲಿವೆ. ಅವರ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಅವರಿಗೆ ಟಿ.ವಿ, ಸ್ಮಾರ್ಟ್ ಫೆÇೀನ್‍ಗಳನ್ನು ಉಚಿತವಾಗಿ ವಿತರಿಸಬೇಕು, ಆ ಬಳಿಕವೇ ಆನ್‍ಲೈನ್ ತರಗತಿ ಪ್ರಾರಂಭಿಸಬೇಕೆಂದು ಮನವಿಯಲ್ಲಿ ತಿಳಿಸಿದೆ.
ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿಗೆ ಮನವಿಯನ್ನು ಸಲ್ಲಿಸಲಾಗಿದೆ. ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ ಮುಖ್ಯಮಂತ್ರಿಗೆ ರವಾನಿಸಲಿರುವ ಮನವಿಯನ್ನು ಸಹಾಯಕ ವಿದ್ಯಾಧಿಕಾರಿಗೆ ಹಸ್ತಾಂತರಿಸಿದರು. ವೇದಿಕೆಯ ಸಂಚಾಲಕ ಸುಂದರ ಬಾರಡ್ಕ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.