HEALTH TIPS

ತುರ್ತು ಸುದ್ದಿ-ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಲಪ್ಪಾಡಿ ವರೆಗೂ ಬಸ್ ಸೌಲಭ್ಯ: ಜಿಲ್ಲಾಧಿಕಾರಿ

     
             ಕಾಸರಗೋಡು: ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದಲ್ಲಿ ಪಿಯುಸಿ ದ್ವಿತೀಯ ವರ್ಷ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅಗತ್ಯದ ಪ್ರಯಾಣ ಸೌಲಭ್ಯ ಏರ್ಪಡಿಸುವುದಾಗಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು. ಕಾಸರಗೋಡು ಜಿಲ್ಲಾಡಳಿತೆ ದಕ್ಷಿಣ ಕನ್ನಡ ಜಿಲ್ಲಾಡಳಿತೆಯೊಂದಿಗೆ ನಡೆಸಿದ ಮಾತುಕತೆಯ ಫಲವಾಗಿ ದಕ್ಷಿಣ ಕನ್ನಡ ಡೆಪ್ಯೂಟಿ ಕಮೀಷನರ್ ಈ ಕ್ರಮಕೈಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜೂ.18ರಂದು ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ಈ ಬಸ್ ಯಾತ್ರಾ ಸೌಲಭ್ಯ ಏರ್ಪಡಿಸಲಾಗಿದೆ.                     
         ಹೆಚ್ಚಿನ ಮಾಹಿತಿಗಾಗಿ ಕಾಸರಗೋಡು ಜಿಲ್ಲಾ ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ: 04994-255145, 9496003201.
                             ತಲಪ್ಪಾಡಿ ವರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ:
        ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಕಾಸರಗೋಡಿನಿಂದ ಮಂಜೇಶ್ವರ ವರೆಗೆ ಸಂಚಾರ ನಡೆಸುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ಗಳು ಇಂದು(ಜೂ.18) ತಲಪ್ಪಾಡಿ ಗಡಿ ವರೆಗೆ ಸಂಚಾರ ನಡೆಸಲಿವೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries