ತಿರುವನಂತಪುರ : ಕಡಿಮೆ ದಿನಗಳ ಅವಧಿಗಾಗಿ ರಾಜ್ಯಕ್ಕೆ ಭೇಟಿ ನೀಡುವವರಿಗೆ ಕೇರಳ ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ 7 ದಿನಗಳ ಕಾಲ ರಾಜ್ಯದಲ್ಲಿ ವಾಸ್ತವ್ಯ ಹೂಡುವವರಿಗೆ ಅನ್ವಯವಾಗಲಿದೆ ಎಂದು ಸರ್ಕಾರ ಪ್ರಕಟಿಸಿದೆ. ಕೇರಳ ಸರ್ಕಾರ ಸೋಮವಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಆಗಮಿಸಿ 7 ದಿನ ವಾಸ್ತವ್ಯ ಹೂಡಬಹುದಾಗಿದ್ದು, 8ನೇ ದಿನ ಹೊರಡಬೇಕಿದೆ. ವ್ಯಾಪಾರ, ಚಿಕಿತ್ಸೆಯ ಉದ್ದೇಶಕ್ಕೆ ಆಗಮಿಸುವ ಜನರಿಗಾಗಿ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ರಾಜ್ಯಕ್ಕೆ ಆಗಮಿಸುವ ಜನರು ಕೋವಿಡ್ - 19 ಜಾಗೃತ ವೆಬ್ ಪೋರ್ಟಲ್‌ನಲ್ಲಿ ಹೆಸರು ನೋಂದಣಿ ಮಾಡಬೇಕು ಮತ್ತು ಪ್ರವೇಶಕ್ಕೆ ಪಾಸುಗಳನ್ನು ಪಡೆಯಬೇಕು. ಹೆಸರು ನೋಂದಣಿಯಾದ ತಕ್ಷಣ ಅಧಿಕಾರಿಗಳು ಅದನ್ನು ಪರಿಶೀಲಿಸಿ ಅನುಮತಿ ನೀಡಲಿದ್ದಾರೆ. ಯಾವುದೇ ವಿಳಂಬ ಆಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ವಿವರ ನೀಡುವುದು ಕಡ್ಡಾಯ :
ರಾಜ್ಯಕ್ಕೆ ಆಗಮಿಸುವ ಜನರು ಯಾರನ್ನು ಭೇಟಿಯಾಗಬೇಕು?, ಭೇಟಿಯ ಉದ್ದೇಶ, ಭೇಟಿ ನೀಡುವ ಸ್ಥಳ, ವಸತಿ ವ್ಯವಸ್ಥೆ ಮುಂತಾದ ವಿವರಗಳನ್ನು ಕಡ್ಡಾಯವಾಗಿ ನೀಡಬೇಕಿದೆ.
ಹೋಟೆಲ್‌ಗೆ ಹೋಗಬೇಕು :
ರಾಜ್ಯಕ್ಕೆ ಆಗಮಿಸುವ ಜನರು ಯಾರನ್ನು ಭೇಟಿಯಾಗಬೇಕೋ, ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಮಾತ್ರ ಭೇಟಿ ನೀಡಬಹುದು. ರಾಜ್ಯದ ಬೇರೆ ಪ್ರದೇಶಗಳಿಗೆ ಭೇಟಿ ನೀಡಲು ಅವಕಾಶವಿಲ್ಲ. ಜನರ ಭೇಟಿ ಬಗ್ಗೆ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿರುತ್ತದೆ.
ವಿದ್ಯಾರ್ಥಿಗಳು :
ಪರೀಕ್ಷೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೆಲವೊಂದು ರಿಯಾಯಿತಿ ನೀಡಲಾಗಿದೆ. ರಾಜ್ಯಕ್ಕೆ ಆಗಮಿಸಿದವರು ಸಾಮಾಜಿಕ ಅಂತರ ಕಾಪಾಡಬೇಕು. ಸ್ಯಾನಿಟೈಸರ್ ಮತ್ತು ಒಂದು ಹೆಚ್ಚುವರಿ ಮಾಸ್ಕ್ ಹೊಂದಿರುವುದು ಕಡ್ಡಾಯವಾಗಿದೆ.
ಕ್ವಾರಂಟೈನ್‌ಗೆ ಹಾಕಲಾಗುತ್ತದೆ :
ರಾಜ್ಯಕ್ಕೆ ಭೇಟಿ ನೀಡಿದವರು ವಾಪಸ್ ಆದ 14 ದಿನಗಳ ಬಳಿಕ ಕೊರೊನಾ ವೈರಸ್ ಸೋಂಕು ತಗುಲಿದರೆ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಕೊಡಬೇಕು. ಒಂದು ವೇಳೆ ಸರ್ಕಾರದ ನಿಯಮ ಪಾಲನೆ ಮಾಡದಿದ್ದರೆ ರಾಜ್ಯದಲ್ಲಿ 14 ದಿನದ ಕ್ವಾರಂಟೈನ್‌ಗೆ ಹಾಕಲಾಗುತ್ತದೆ.