ಕುಂಬಳೆ: ಬಿಜೆಪಿ ಒಬಿಸಿ ಮೋರ್ಚಾ ಮಂಜೇಶ್ವರ ಮಂಡಲ ಸಮಿತಿ ಸಭೆಯು ಕುಂಬಳೆಯಲ್ಲಿರುವ ಪಕ್ಷದ ಮಂಡಲ ಸಮಿತಿ ಕಾರ್ಯಾಲಯದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಒಬಿಸಿ ಮೋರ್ಚಾದ ಮಂಡಲ ಅಧ್ಯಕ್ಷರಾದ ಚಂದ್ರಹಾಸ ಪೂಜಾರಿ ಕಡಂಬಾರು ಅವರು ವಹಿಸಿದ್ದರು. ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ಓ.ಕೆ.ರಾಧಾಕೃಷ್ಣನ್ ಅವರು ಉದ್ಘಾಟಿಸಿದರು. ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸದೇ ರಾಜ್ಯ ಸರ್ಕಾರವು ಜನರನ್ನು ವಂಚಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದರು. ಇದರಿಂದ ಒಬಿಸಿ ವಿಭಾಗಕ್ಕೊಳಪಟ್ಟ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ. ಇದಕ್ಕೆದುರಾಗಿ ಮಂಡಲದ ಎಲ್ಲಾ ಪಂಚಾಯತುಗಳಲ್ಲಿ ಧರಣಿ, ಪ್ರತಿಭಟನೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೇ ಮಣಿಯಂಪಾರೆ ಪರಿಸರದ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಅಪಾದನೆಯ ಕೇಸು ಹಾಕಿ ಸಿಲುಕಿಸಲು ಪೆÇೀಲೀಸ್ ನವರು ಆಡಳಿತ ಪಕ್ಷದ ಏಜೆಂಟರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೆದುರಾಗಿಯೂ ಪೆÇೀಲೀಸ್ ಠಾಣೆಗೆ ಮಾರ್ಚ್ ನಡೆಸಿ ಹೋರಾಟ ನಡೆಸುವ ಕಾರ್ಯಕ್ರಮಗಳನ್ನು ನಡೆಸಲು ಮುನ್ಸೂಚನೆಯಾಗಿ ಈ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯಧರ್ಶಿ ರಶ್ಮಿಲ್ ನಾಥ್, ರಾಜ್ಯ ಕೋಶಾಧಿಕಾರಿ ನ್ಯಾಯವಾದಿ ನವೀನ್ ರಾಜ್, ಜಿಲ್ಲಾಧ್ಯಕ್ಷರಾದ ಪ್ರೇಮ್ ರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಕೆ.ಐಲ್, ಬಿಜೆಪಿ ಮಂಡಲ ಅಧ್ಯಕ್ಷ ಮಣಿಕಂಠ ರೈ ಮುಂತಾದವರು ಮಾತಾನಾಡಿದರು ಒಬಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್ ಕುಮಾರ್ ಮಣಿಯಂಪಾರ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ಸಂಕಪ್ಪ ಸುವರ್ಣ ವಂದಿಸಿದರು.


