HEALTH TIPS

ಕರೋನಾ: ಮುಂದಿನ 1 ವರ್ಷದವರೆಗೆ ಅನ್ವಯವಾಗುವಂತೆ ಕೇರಳ ಸರ್ಕಾರದಿಂದ ಹೊಸ ಮಾರ್ಗಸೂಚಿ

   
        ತಿರುವನಂತಪುರ: ಕೇರಳದಲ್ಲಿ  ಕರೋನವೈರಸ್  ತಡೆಗಟ್ಟುವ ಮಾರ್ಗಸೂಚಿಗಳನ್ನು ಮುಂದಿನ ಒಂದು ವರ್ಷದವರೆಗೆ ಪುನಃ ತಚಿಸಲಾಗಿದೆ. ಕೇರಳ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರದ ನಿಯಮಗಳನ್ನು ಅನುಸರಿಸುವ ನಿಯಮಗಳು ಮುಂದಿನ ವರ್ಷ ಜುಲೈ ವರೆಗೆ ಜಾರಿಯಲ್ಲಿರುತ್ತವೆ. ಸರ್ಕಾರದ ಅನುಮತಿಯಿಲ್ಲದೆ ಯಾವುದೇ ಕಾರ್ಯಕ್ರಮವನ್ನು ಆಯೋಜಿಸುವಂತಿಲ್ಲ. ಕೇರಳದ ಸಿಎಂ ಕಚೇರಿಯಿಂದ ಹೊರಡಿಸಲಾದ ಆದೇಶದಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಟ್ರಿಪಲ್ ಲಾಕ್‍ಡೌನ್ ಅಂದರೆ ತಿರುವನಂತಪುರಂನಲ್ಲಿ ಒಂದು ವಾರ ಹೆಚ್ಚಿನ ನಿಬರ್ಂಧಗಳು ಅನ್ವಯವಾಗುತ್ತವೆ.
        ಕೇರಳ ಸರ್ಕಾರವು ಒಂದು ವರ್ಷ ಜನರಿಗೆ  ಕೋವಿಡ್ -19 ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಿದೆ. ಇದರ ಅಡಿಯಲ್ಲಿ ಒಂದು ವರ್ಷದವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಕರೋನಾವೈರಸ್ ಹರಡದಂತೆ ತಡೆಯಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದನ್ನು ಜಾರಿಗೆ ತರಲು ಕೇರಳ ಸರ್ಕಾರ ತನ್ನ ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ನು ಬದಲಾಯಿಸಿದೆ. ಹೊಸ ನಿಯಮಗಳು ಮುಂದಿನ ವರ್ಷ ಜುಲೈ ವರೆಗೆ ಜಾರಿಯಲ್ಲಿರುತ್ತವೆ ಎಂದು ರಾಜ್ಯ ಸರ್ಕಾರ ಹೇಳಿದೆ.
               ಎಚ್ಚರ! ಎಚ್ಚರ! ಗಾಳಿಯಲ್ಲೂ ಹರಡುತ್ತಂತೆ ಕರೋನಾ ವೈರಸ್:
     ಮಾರ್ಗಸೂಚಿಗಳ ಪ್ರಕಾರ ಸಾರ್ವಜನಿಕ ಸ್ಥಳಗಳು ಮತ್ತು ಕಾರ್ಯಕ್ರಮಗಳ ಸಮಯದಲ್ಲಿ ಜನರು 6 ಅಡಿಗಳ ಸಾಮಾಜಿಕ ಅಂತರವನ್ನು ಅನುಸರಿಸಬೇಕಾಗುತ್ತದೆ. 50ಕ್ಕೂ ಹೆಚ್ಚು ಜನರು ಮದುವೆಗೆ ಹಾಜರಾಗಲು ಸಾಧ್ಯವಿಲ್ಲ. ಅಲ್ಲದೆ ಅಂತ್ಯಕ್ರಿಯೆಯಲ್ಲಿ 20ಕ್ಕೂ ಹೆಚ್ಚು ಜನರನ್ನು ಅನುಮತಿಸಲಾಗುವುದಿಲ್ಲ. ಹೊಸ ಮಾರ್ಗಸೂಚಿಗಳ ಪ್ರಕಾರ ಸಂಬಂಧಪಟ್ಟ ಪ್ರಾಧಿಕಾರದ ಲಿಖಿತ ಅನುಮತಿಯಿಲ್ಲದೆ ಜನರು ಯಾವುದೇ ರೀತಿಯ ಕಾರ್ಯಕ್ರಮಗಳು, ಸಭೆ ಸಮಾರಂಭಗಳು, ಧರಣಿ ಅಥವಾ ಪ್ರತಿಭಟನೆ ನಡೆಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗುವುದು. ಸರ್ಕಾರದ ಈ ನಿಯಮಗಳನ್ನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries