HEALTH TIPS

ಕೋವಿಡ್ ಹೊಸ ಅಧ್ಯಾದೇಶ-ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ಅಂಗಡಿಗಳು ತೆರೆದು ಕಾರ್ಯಾಚರಿಸಬಹುದು: ಜಿಲ್ಲಾಧಿಕಾರಿ

 
            ಕಾಸರಗೋಡು: ಜಿಲ್ಲೆಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ಅಂಗಡಿಗಳು ತೆರೆದು ಕಾರ್ಯಾಚರಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.
          ಆದರೆ ಕಂಟೈ ನ್ಮೆಂಟ್ ಝೋನ್ ಗಳಲ್ಲಿ ದಿನ ಬಿಟ್ಟು ದಿನ ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ಅಗತ್ಯ ಸಾಮಾಗ್ರಿಗಳ ಅಂಗಡಿಗಳು ಮಾತ್ರ ತೆರೆಯಬಹುದು. ಕಾಸರಗೋಡು ಜಿಲ್ಲೆಯ ಉಳಿದ ಪ್ರದೇಶಗಳಲ್ಲಿ ಎಲ್ಲ ಅಂಗಡಿಗಳೂ ಬೆಳಗ್ಗೆ 8 ರಿಂದ ಸಂಜೆ 6 ಗಂಟೆ ವರೆಗೆ ತೆರೆದು ಕಾರ್ಯಾಚರಿಸಬಹುದು. ಆದರೆ ಅಂಗಡಿಗಳಲ್ಲಿ ಜನ ಗುಂಪು ಸೇರುವುದು ಸಲ್ಲದು, ಮಾಸ್ಕ್ ಧಾರಣೆ, ಸಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದು ಕೊಳ್ಳುವಿಕೆ ಇತ್ಯಾದಿ ಕಡ್ಡಾಯವಾಗಿ ಪಾಲಿಸಬೇಕು. ಅಂಗಡಿಗಳ ಸಿಬ್ಬಂದಿ ಮಾಸ್ಕ್ , ಗ್ಲೌಸ್ ಧರಿಸಲೇ ಬೇಕು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಅಂಗಡಿ ಮುಚ್ಚುಗಡೆ ಸಹಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಪೆÇಲೀಸರಿಗೆ ಆದೇಶ ನೀಡಿದ್ದಾರೆ.
           ಕಂಟೈ ನ್ಮೆಂಟ್ ಝೋನ್ ಗಳ ಸಹಿತ ಪ್ರದೇಶಗಳ ಅಕ್ಷಯ ಕೇಂದ್ರಗಳು ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ತೆರೆದು ಕಾರ್ಯಾರಿಸಬಹುದು. ಮೆಡಿಕಲ್ ಶಾಪ್ ಗಳಿಗೆ ಸಮಯದ ಅವಧಿ ಕಡ್ಡಾಯವಿಲ್ಲ. ಕಂಟೈ ನ್ಮೆಂಟ್ ಝೋನ್ ಗಳಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳು, ಮೋಟಾರು ವಾಹನ ಶಾಪ ಗಳೂ ಇತ್ಯಾದಿ ತೆರೆಯ ಕೂಡದು ಎಂದವರು ಹೇಳಿದರು.
                                  ಅಗತ್ಯ ಸಾಮಗ್ರಿಗಳ ಅಂಗಡಿಗಳು ಇಂತಿವೆ:
       ತರಕಾರಿ, ಹಾಲು, ಹಣ್ಣು, ಅಕ್ಕಿ ಸಹಿತ ಧಾನ್ಯಗಳು, ಮೀನು-ಮಾಂಸ ಮಾರಾಟ ಅಂಗಡಿಗಳು, ಅಕ್ಕಿ-ಗೋಧಿ ಮಿಲ್ಲುಗಳು, ಮೆಡಿಕಲ್ ಶಾಪ್ ಗಳು ಇತ್ಯಾದಿಗಳನ್ನು ಅಗತ್ಯ  ಸಾಮಾಗ್ರಿಗಳ ಅಂಗಡಿಗಳು ಎಂಬುದಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.
            ಈ ವಿಚಾರದಲ್ಲಿ ಸಂಶಯಗಳಿದ್ದಲ್ಲಿ ನಿಯಂತ್ರಣ ಕೊಠಡಿ-04994-255001 ಸಂಖ್ಯೆಗೆ ಕರೆಮಾಡಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries