ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ 'ಕೋವಾಕ್ಸಿನ್' ಕ್ಲಿನಿಕಲ್ ಪ್ರಯೋಗಗಳಿಗೆ ತುರ್ತು ಅನುಮೋದನೆ ನೀಡುವಂತೆ ಐಸಿಎಂಆರ್ ದೇಶದ 12 ಪ್ರಮುಖ ಆಸ್ಪತ್ರೆಗಳಿಗೆ ಶುಕ್ರವಾರ ಸೂಚನೆ ನೀಡಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮತ್ತು ನ್ಯಾಷನಲ್ ಇನ್'ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಕಂಪನಿ ಈ ಲಸಿಕೆಯನ್ನು ತಯಾರಿಸಿದ್ದು, ಇದೀಗ ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಕಂಪನಿ ಆಗಸ್ಟ್ 15 ರಂದು ಈ ಔಷಧಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಐಸಿಎಂಆರ್, ಫಾಸ್ಟ್ ಟ್ರಾಕ್ ಟ್ರಯಲ್ ನಡೆಸಲು ನಿರ್ಧರಿಸಿದ್ದು, ಜೂಲೈ7ರಿಂದ ಕ್ಲಿನಿಕಲ್ ಟ್ರಯಲ್ ಶುರುವಾಗಲಿದೆ ಎಂದು ತಿಳಿಸಿದೆ.
ಭಾರತ ಅಭಿವೃದ್ಧಿಪಡಿಸಿದ ಮೊದಲ ಸ್ಥಳೀಯ ಲಸಿಕೆ ಇದಾಗಿದ್ದು, ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಪುಣೆ ವೈರಾಲಜಿ ವಿಭಾಗ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್ ಈ ಲಸಿಕೆ ಅಭಿವೃದ್ಧಿಗೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ. ಈಗಾಗಲೇ ದೇಶದ 12 ಪ್ರಮುಖ ಆಸ್ಪತ್ರೆಗಳಲ್ಲಿ ಈ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳಿಗೆ ತುರ್ತು ಅನುಮೋದನೆ ನೀಡುವಂತೆಯೂ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
https://twitter.com/SumiSukanya?ref_src=twsrc%5Etfw%7Ctwcamp%5Etweetembed%7Ctwterm%5E1278895476209676288%7Ctwgr%5E&ref_url=https%3A%2F%2Fwww.kannadaprabha.com%2Fnation%2F2020%2Fjul%2F03%2Fcovid-19-icmr-asks-12-major-hospitals-to-grant-nod-for-covaxin-trials-422774.html
Sumi Dutta
@SumiSukanya




