HEALTH TIPS

ಕೋವಿಡ್-19: ದೇಶದಲ್ಲಿ ಒಂದೇ ದಿನ 34,884 ಕೇಸ್, 26,273 ಮಂದಿ ಸಾವು; ಒಟ್ಟು ಸೋಂಕಿತರ ಸಂಖ್ಯೆ 1.38 ಲಕ್ಷಕ್ಕೆ ಏರಿಕೆ

 
       ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 34,884 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
      ಈ ನಡುವೆ ನಿನ್ನೆ ಒಂದೇ ದಿನ ಮಹಾಮಾರಿ ವೈರಸ್ 671 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ ಕೂಡ 26,273ಕ್ಕೆ ತಲುಪಿದೆ.  ಇನ್ನು 10,38,716 ಮಂದಿ ಸೋಂಕಿತರ ಪೈಕಿ 6,53,751 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇನ್ನೂ ದೇಶದಲ್ಲಿ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. ದೇಶದಲ್ಲೇ ಅತೀ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಶುಕ್ರವಾರ ಮತ್ತೆ 8308 ಮಂದಿಗೆ ಹೊಸದಾಗಿ ಕೊರೋನಾ ವ್ಯಾಪಿಸಿದೆ. ಈ ಮೂಲಕ ರಾಜ್ಯದಲ್ಲಿ ಸತತ ಮೂರು ದಿನಗಳಿಂದಲೂ 8 ಸಾವಿರಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 2,92,589ರ ಮೂಲಕ 3 ಲಕ್ಷದ ಹತ್ತಿರಕ್ಕೆ ಸಾಗುತ್ತಿದೆ. ಇನ್ನು ಗುರುವಾರ ಕೊರೋನಾಕ್ಕೆ 258 ಮಂದಿ ಮೃತರಾಗಿದ್ದು, ಈ ವೈರಸ್'ಗೆ ಬಲಿಯಾದವರ ಸಂಖ್ಯೆ 11,452ಕ್ಕೆ ಜಿಗಿದಿದೆ.
     ತಮಿಳುನಾಡಿನಲ್ಲಿ 4538, ಕರ್ನಾಟಕದಲ್ಲಿ 3693, ಆಂಧ್ರಪ್ರದೇಶ 2602, ಪಶ್ಚಿಮ ಬಂಗಾಳ 1894, ಬಿಹಾರದಲ್ಲಿ 1742ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ 115, ತಮಿಳುನಾಡಿನಲ್ಲಿ 79, ಆಂಧ್ರಪ್ರದೇಶ 42, ಪಶ್ಚಿಮ ಬಂಗಾಳದಲ್ಲಿ 26 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries