HEALTH TIPS

ದೇಶದಲ್ಲಿ ಒಂದೇ ದಿನ 22,752 ಸೋಂಕು: ಸತತ 6ನೇ ದಿನವೂ 20 ಸಾವಿರಕ್ಕೂ ಅಧಿಕ ಮಂದಿಗೆ ವೈರಸ್, 7.42 ಲಕ್ಷದತ್ತ ಸೋಂಕಿತರ ಸಂಖ್ಯೆ

 
              ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್'ನ ನಾಗಾಲೋಟ ಮುಂದುವರೆದಿದೆ. ಬುಧವಾರ 22,752 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
          ಈ ಮೂಲಕ ಸತತ 6ನೇ ದಿನವೂ 20 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ದಾಖಲಾದಂತಾಗಿವೆ. ಇದೇ ವೇಳೆ ಕೊರೋನಾಗೆ ಒಂದೇ ದಿನ 482 ಮಂದಿ ಬಲಿಯಾಗುವುದರೊಂದಿಗೆ ಮೃತರ ಸಂಖ್ಯೆ 20,642ಕ್ಕೆ ಏರಿಕೆ ಕಂಡಿದೆ. ಇದೇ ವೇಳೆ ಮಹಾರಾಷ್ಟ್ರದಲ್ಲಿ 5,134 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2,17,121ಕ್ಕೆ ಏರಿಕೆಯಾಗಿದೆ. ಇನ್ನು ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 1,18,594ಕ್ಕೆ ಹಾಗೂ ದೆಹಲಿಯಲ್ಲಿ 102831ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲೆಡೆ ಒಂದೇ ದಿನ 17802 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಒಟ್ಟು 454175 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
           ಭಾರತದಲ್ಲಿ ಕೊರೋನಾವೈರಸ್ ಪ್ರಕರಣಗಳು 7 ಲಕ್ಷ ಹಾಗೂ ಸಾವಿನ ಸಂಖ್ಯೆ 20 ಸಾವಿರ ಗಡಿ ದಾಟಿರುವ ಹೊರತಾಗಿಯೂ ಪ್ರತಿ 10 ಲಕ್ಷ ಜನಸಂಖ್ಯೆಗೆ ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ವಿಶ್ವದಲ್ಲೇ ಕಡಿಮೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
        ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 505.37 ಮಂದಿ ಕೊರೋನಾಕ್ಕೆ ತುತ್ತಾಗಿದ್ದಾರೆ. ಆದರೆ, ಜಾಗತಿಕ ಸರಾಸರಿ 10 ಲಕ್ಷ ಜನಸಂಖ್ಯೆಗೆ 1,453.25ರಷ್ಟಿದೆ. ಇದೇ ವೇಳೆ ಚಿಲಿಯಲ್ಲಿ 10 ಲಕ್ಷಕ್ಕೆ 15,459,8 ಜನರಿಗೆ ಕೊರೋನಾ ಸೋಂಕು ತಗುಲಿದ್ದರೆ, ಪೆರುವಿನಲ್ಲಿ 9,070 ಜನರು ಸೋಂಕಿಗೆ ತುತ್ತಾಗಿದ್ದಾರೆ. ಅದೇ ರೀತಿ ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 14.27 ಸಾವು ಸಂಭವಿಸುತ್ತಿದೆ. ಆದರೆ, ಜಾಗತಿಕವಾಗಿ 68.29 ಮಂದಿ ಸಾವಿಗೀಡಾಗುತ್ತಿದ್ದಾರೆಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries