ಜಿನೆವಾ: ವಿಶ್ವದಾದ್ಯಂತ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,78,877 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಈ ವರೆಗೂ ವಿವಿಧ ದೇಶಗಳಲ್ಲಿ ಪತ್ತೆಯಾಗಿರುವ ಒಟ್ಟು ಸೋಂಕಿತರ ಸಂಖ್ಯೆ 15,374,394ಕ್ಕೆ ಏರಿಕೆಯಾಗಿದೆ.
ಈ ನಡುವೆ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ 630,211 ಮಂದಿ ಬಲಿಯಾಗಿದ್ದು, 2,78,877 ಮಂದಿ ಸೋಂಕಿತರ ಪೈಕಿ 9,343,500 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 5,394,597 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಹೆಚ್ಚು ಸೋಂಕು ಹೊಂದಿರುವ ವಿಶ್ವದ ಟಾಪ್ 10 ರಾಷ್ಟ್ರಗಳ ಪೈಕಿ ಮೊದಲನೇ ಸ್ಥಾನದಲ್ಲಿರುವ ಅಮೆರಿಗಾದಲ್ಲಿ ಒಟ್ಟು 4,100,875ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 146,183 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2ನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 2,231,871 ಮಂದಿ ಸೋಂಕಿಗೀಡಾಗಿದ್ದು 82,890 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,239,684ಕ್ಕೆ ತಲುಪಿದ್ದು, 29,890 ಮಂದಿ ಬಲಿಯಾಗಿದ್ದಾರೆ.


