HEALTH TIPS

ದೇಶಾದ್ಯಂತ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ಕೊರೋನಾ ಪತ್ತೆ: ಸೋಂಕಿತರ ಸಂಖ್ಯೆ 14.8 ಲಕ್ಷ, 33,425 ಮಂದಿ ಸಾವು

 
      ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
     ಈ ನಡುವೆ ಒಂದೇ ದಿನ 654 ಮಂದಿ ಬಲಿಯಾಗಿದ್ದು, ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 33,425 ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
       14,83,157 ಮಂದಿ ಸೋಂಕಿತರ ಪೈಕಿ 9,52,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,96,988 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಹಲವು ದಿನಗಳ ಬಳಿಕ ಸೋಂಕು ಇಳಿಕೆ ಕಂಡಿದೆ. ದೆಹಲಿಯಲ್ಲಿ 2 ತಿಂಗಳಲ್ಲೇ ಕನಿಷ್ಟ 613 ಕೇಸ್ ದಾಖಲಾಗಿದೆ.

Single-day spike of 47,704 positive cases & 654 deaths in India in the last 24 hours. Total #COVID19 positive cases stand at 14,83,157 including 4,96,988 active cases, 9,52,744 cured/discharged/migrated & 33,425 deaths: Health Ministry

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries