HEALTH TIPS

ಒಂದೇ ದಿನ ದೇಶಾದ್ಯಂತ 2,62,679 ಕೋವಿಡ್ ಪರೀಕ್ಷೆ, ಜು.8ರವರೆಗೆ ಒಟ್ಟಾರೆ 1,04,73,771 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್


            ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,62,679 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
           ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,62,679 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.8 ವರೆಗೂ 1,04,73,771 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
        ಭಾರತದಲ್ಲಿ ಕೊರೋನಾವೈರಸ್ ಪ್ರಕರಣಗಳು 7 ಲಕ್ಷ ಹಾಗೂ ಸಾವಿನ ಸಂಖ್ಯೆ 20 ಸಾವಿರ ಗಡಿ ದಾಟಿರುವ ಹೊರತಾಗಿಯೂ ಪ್ರತಿ 10 ಲಕ್ಷ ಜನಸಂಖ್ಯೆಗೆ ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ವಿಶ್ವದಲ್ಲೇ ಕಡಿಮೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
        ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 505.37 ಮಂದಿ ಕೊರೋನಾಕ್ಕೆ ತುತ್ತಾಗಿದ್ದಾರೆ. ಆದರೆ, ಜಾಗತಿಕ ಸರಾಸರಿ 10 ಲಕ್ಷ ಜನಸಂಖ್ಯೆಗೆ 1,453.25ರಷ್ಟಿದೆ. ಇದೇ ವೇಳೆ ಚಿಲಿಯಲ್ಲಿ 10 ಲಕ್ಷಕ್ಕೆ 15,459,8 ಜನರಿಗೆ ಕೊರೋನಾ ಸೋಂಕು ತಗುಲಿದ್ದರೆ, ಪೆರುವಿನಲ್ಲಿ 9,070 ಜನರು ಸೋಂಕಿಗೆ ತುತ್ತಾಗಿದ್ದಾರೆ. ಅದೇ ರೀತಿ ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 14.27 ಸಾವು ಸಂಭವಿಸುತ್ತಿದೆ. ಆದರೆ, ಜಾಗತಿಕವಾಗಿ 68.29 ಮಂದಿ ಸಾವಿಗೀಡಾಗುತ್ತಿದ್ದಾರೆಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries