HEALTH TIPS

ತಮಿಳುನಾಡಿನಲ್ಲಿ ಜು.31ರ ವರೆಗೆ ಸರ್ಕಾರಿ, ಖಾಸಗಿ ಬಸ್ ಸಂಚಾರ ಬಂದ್

        ಚೆನ್ನೈ: ತಮಿಳುನಾಡು ಸರ್ಕಾರ ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರದ ಮೇಲಿನ ನಿಬರ್ಂಧವನ್ನು ಜುಲೈ 31ರ ವರೆಗೆ ವಿಸ್ತರಿಸಿ ಸೋಮವಾರ ಆದೇಶ ಹೊರಡಿಸಿದೆ.
        ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ತಮಿಳುನಾಡಿನಲ್ಲಿ ಜುಲೈ 15ರ ವರೆಗೆ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರವನ್ನು ನಿಷೇಧಿಸಲಾಗಿತ್ತು. ಇದೀಗ ಅದನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ. ಕ್ಯಾಬ್ ಮತ್ತು ಆಟೋ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ತಮಿಳುನಾಡು ಸರ್ಕಾರ ಮನವಿ ಮಾಡಿದೆ.
     ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಒಂದೇ ಬರೋಬ್ಬರಿ 4,328 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,42,798ಕ್ಕೆ ಏರಿಕೆಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries