ಕಾಸರಗೋಡು: ಪರಿಶಿಷ್ಟ ಜಾತಿ-ಪ.ಪಂಗಡಗಳ ಉದ್ಯೋಗಾರ್ಥಿಗಳ ಮೇಲಿನ ಕೇರಳ ಸರಕಾರದ ಅವಗಣನೆಯ ವಿರುದ್ಧ ಎಸ್ ಸಿ ಮೋರ್ಚಾ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ಎಸ್ ಮೋರ್ಚಾ ಜಿಲ್ಲಾ ಸಮಿತಿ ಅಧ್ಯಕ್ಷ ಸಂಪತ್ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ, ವಕೀಲ ಕೆ. ಶ್ರೀಕಾಂತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರವು ಪರಿಶಿಷ್ಟ ಜಾತಿ, ಪಂಗಡಗಳ ಉದ್ಯೋಗಾರ್ಥಿಗಳನ್ನು ನಿರಂತರ ವಂಚಿಸುತ್ತಾ ಬಂದಿದೆ. ಸರ್ಕಾರದ ಈ ಧೋರಣೆಯಿಂದ ಪ. ಜಾತಿ, ಪಂಗಡಗಳ ಉದ್ಯೋಗಾರ್ಥಿಗಳು ಉದ್ಯೋಗದಿಂದ ವಂಚಿತರಾಗಬೇಕಾಗುತ್ತಿದೆ ಎಂದು ತಿಳಿಸಿದ ಅವರು, ಎಂಪೆÇ್ಲೀಯಿಸ್ ಸೆಕ್ಷನ್‍ನ ಎ, ಬಿ ಸೆಕ್ಷನ್ ಮರುಸ್ಥಾಪಿಸುವುದರ ಜತೆಗೆ ಪ್ರತ್ಯೇಕ ನೇಮಕಾತಿ ಶೀಘ್ರ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ಕೆ ಕಯ್ಯಾರ್ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಸರಗೋಡು ಮಂಡಲಾಧ್ಯಕ್ಷ ಅವಿನ್ ಎಸ್ ವಿ, ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ.ಪಿ ಪೆರಡಾಲ ಸ್ವಾಗತಿಸಿ, ಉಪಾಧ್ಯಕ್ಷ ಶಶಿ ಅರಿಯಪ್ಪಾಡಿ ವಂದಿಸಿದರು.





