ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರತಿರೋಧ ನಡೆಸುವ ವೇಳೆ ಸಾಮಾಜಿಕ ಹರಡುವಿಕೆ ತಡೆಯುವಿಕೆಗೆ ಆದ್ಯತೆ ನೀಡಲಾಗುವುದು ಎಂದು ಕಂದಾಯ ಸಚಿವ ಇ. ಚಂದ್ರಶೇಖರನ್ ಅಭಿಪ್ರಾಪಟ್ಟರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಕೋವಿಡ್ ಪ್ರತಿರೋಧ ಚಟುವಟಿಕೆಗಳ ಅವಲೋಕನ ಸಂಬಂಧ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಸಾಮಾಜಿಕ ಹರಡುವಿಕೆ ತಲೆದೋರಿದ್ದ ಆರಂಭದ ದಿನಗಳಲ್ಲಿ ಕೇವಲ 36 ದಿನಗಳಲ್ಲಿ ತಡೆಯುವಿಕೆ ಸಾಧ್ಯವಾದುದು ಜಿಲ್ಲೆಯ ಹೆಗ್ಗಳಿಕೆಯಾಗಿದೆ. ಕೋವಿಡ್ ಪ್ರತಿರೋಧ ಚಟುವಟಿಕೆಗಳನ್ನು ಜಿಲ್ಲಾಡಳಿತೆ ಮತ್ತು ಜನಪ್ರತಿನಿಧಿಗಳು ಏಕೀಕರಣದೊಂದಿಗೆ ನಡೆಸುತ್ತಿರುವುದು ರೋಗದ ಹರಡುವಿಕೆಯನ್ನು ತಡೆಯುವಲ್ಲಿ ದೊಡ್ಡ ಕೊಡುಗೆ ನೀಡಿದೆ ಎಂದು ಕಂದಾಯ ಸಚಿವ ತಿಳಿಸಿದರು.
ಮುಂದಿನ ದಿನಗಳಲ್ಲಿ ವಿದೇಶಗಳಿಂದ, ಇತರ ರಾಜ್ಯಗಳಿಂದ ಮಂದಿ ಅಧಿಕ ಪ್ರಮಾಣದಲ್ಲಿ ಊರಿಗೆ ಮರಳುವ ಸಾಧ್ಯತೆಗಳಿದ್ದು, ಅಗತ್ಯದ ಎಲ್ಲ ಜಾಗರೂಕತೆಗಳನ್ನು ಕೈಗೊಳ್ಳಬೇಕು. ಕೋವಿಡ್ ಸಂಹಿತೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದವರು ನುಡಿದರು. ಶಿಕ್ಷಕರನ್ನು ಕೋವಿಡ್ ಪ್ರತಿರೋಧ ಚಟುವಟಿಕೆಗಳಲ್ಲಿ ಬಳಸುವ ಮಾಸ್ಟರ್ ಯೋಜನೆ ಯಶಸ್ವಿಯಾಗಿದ್ದು, ಇಡೀ ರಾಜ್ಯದ ಗಮನ ಸೆಳೆದಿದ್ದು, ವ್ಯಾಪಕ ಶ್ಲಾಘನೆಗೆ ಕಾರಣವಾಗಿದೆ ಎಂದರು.
ಶಾಸಕರಾದ ಎಂಸಿ.ಕಮರುದ್ದೀನ್, ಎನ್.ಎ.ನೆಲ್ಲಿಕುನ್ನು, ಕೆ.ಕುಂಞÂ ರಾಮನ್, ಎಂ.ರಾಜಗೋಪಾಲ್, ಗ್ರಾಮ ಪಂಚಾಯತ್ ಅಧ್ಯಕ್ಷರ ಅಸೋಸಿಯೆಶನ್ ಅಧ್ಯಕ್ಷ ಎ.ಎ.ಜಲೀಲ್, ಕಾಞಂಗಾಡ್ ನಗರಸಭೆ ಅಧ್ಯಕ್ಷ ವಿ.ವಿ.ರಮೇಶನ್, ನೀಲೇಶ್ವರ ನಗರಸಭೆ ಅಧ್ಯಕ್ಷ ಪೆÇ್ರ.ಕೆ.ಪಿ.ಜಯರಾಜನ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಿ.ಶಿಲ್ಪಾ, ಜಿಲ್ಲಾ ವೈದ್ಯಾಧಿಕಾರಿ ಎ.ವಿ.ರಾಮದಾಸ್, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಎ.ಟಿ.ಮನೋಜ್, ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ. ಉಪಸ್ಥಿತರಿದ್ದರು.