ಕಾಸರಗೋಡು: ಜಿಲ್ಲೆಯಲ್ಲಿ ಕಳೆದ ಶುಕ್ರವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದೆ.
ತೋಡುಗಳೆಲ್ಲ ತುಂಬಿ ಹರಿಯುತ್ತಿದೆ. ಚರಂಡಿ, ತೋಡುಗಳಿಲ್ಲದ ಸ್ಥಳಗಳಲ್ಲಿ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿದ್ದು, ವಾಹನಗಳಿಗೆ, ದಾರಿ ಹೋಕರಿಗೆ ಸಮಸ್ಯೆಯಾಗುತ್ತಿದೆ.
ಜಿಲ್ಲೆಯ ವಿವಿಧೆಡೆ ಕಡಲ್ಕೊರೆತ ಭೀತಿಯಲ್ಲಿದೆ. ಕುಂಬಳೆ ಕೊಯಿಪ್ಪಾಡಿ, ಉಪ್ಪಳ ಶಾರದಾನಗರ, ಚೇರಂಗೈ, ಕೀಯೂರು, ಕಾಸರಗೋಡು, ಚೌಕಿ ಮೊದಲಾದೆಡೆಗಳಲ್ಲಿ ಕಡಲ್ಕೊರೆತ ಭೀತಿ ಎದುರಾಗಿದೆ.
ಕಾಸರಗೋಡು ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಇನ್ನು ಕೆಲವು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.





