HEALTH TIPS

ಉಡುಪಿ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು, ಪುತ್ತಿಗೆ ಮಠ ಸೀಲ್ ಡೌನ್!

     
           ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೂ ಕೊರೋನಾ ಕಾಲಿಟ್ಟಿದೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊರೋನಾ ಸೋಂಕು ದೃಢಪಟ್ಟಿದೆ.
             ಮಠದ ಮೂಲಗಳ ಪ್ರಕಾರ, ಜುಲೈ 20ರಂದು ಸ್ವಾಮೀಜಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಂತರ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಪುತ್ತಿಗೆ ಶ್ರೀಗಳು 15 ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ಆಗಮಿಸಿದ ಶ್ರೀಗಳಿಗೆ ಕೆಲ ದಿನಗಳಿಂದ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. 
       ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆ ಮಠವನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೋನಾ ಸಂದರ್ಭದಲ್ಲಿಯೂ ಅನೇಕ ಭಕ್ತರು ಮಠಕ್ಕೆ ಆಗಮಿಸಿ, ಸ್ವಾಮೀಜಿಯಿಂದ ಆಶೀರ್ವಾದ ಪಡೆದುಕೊಂಡಿದ್ದರು. ಇದರಿಂದಾಗಿ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries